ಹುಬ್ಬಳ್ಳಿ: ನಗರದ ಉಣಕಲ್ಲನಲ್ಲಿ ರವಿವಾರ ತಡರಾತ್ರಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿ ಒಂಭತ್ತು ಜನರು ಸುಟ್ಟು ಗಾಯಗೊಂಡಿದ್ದಾರೆ. ಅವರೆಲ್ಲರಿಗೆ ಕೆಎಂಸಿಆರ್ಐ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಲಾಗುತ್ತಿದೆ. ಬೇರೆಡೆ ಅವರನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ನೀಡುವ ಅವಶ್ಯಕತೆ ಇಲ್ಲ. ಇಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗುವುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು.
SBI Recruitment: ಉದ್ಯೋಗ ಹುಡುಕುತ್ತಿದ್ದೀರಾ..? SBI ಬ್ಯಾಂಕ್ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಲಕ್ಷಗಟ್ಟಲೆ ಸಂಬಳ
ಕೆಎಂಸಿಆರ್ಐ ಆಸ್ಪತ್ರೆಗೆ ಭೇಟಿಕೊಟ್ಟ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಾಯಾಳುಗಳಿಗೆ ರಾತ್ರಿ ಚಿಕಿತ್ಸೆ ವೇಳೆ ವೈದ್ಯರ ನಿರ್ಲಕ್ಷ್ಯ ವಿಚಾರವಾಗಿ ಮಾಹಿತಿ ತರಿಸಿಕೊಂಡು, ತಪ್ಪಿತಸ್ಥರ ಮೇಲೆ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.