ಕೋಲಾರ: ಹಾಸ್ಟೆಲ್ʼನ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ಪಟ್ಟಣದ ಹೊರವಲಯದ ಬೈರವೇಶ್ವರ ಕಾಲೇಜು ಹಾಸ್ಟೆಲ್ ನಲ್ಲಿ ನಡೆದಿದೆ. ಪ್ರಥಮ ಪಿ ಯು ಸಿ ಓದುತ್ತಿದ್ದ ಬಿಂದುಶ್ರೀ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದು,
Raw Banana: ಬಾಳೆಕಾಯಿ ಸೇವನೆ ಆರೋಗ್ಯಕ್ಕೆ ಎಷ್ಟು ಒಳ್ಳೆಯದು ಅನ್ನೋದು ನಿಮಗೆ ಗೊತ್ತಾ..?
ಹಾಸ್ಟೆಲ್ನ ಮಂಚದ ಕಂಬಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತ ವಿದ್ಯಾರ್ಥಿನಿ ಚಿಕ್ಕಬಳ್ಳಾಪುರ ಜಿಲ್ಲೆಯ ಗಂಗರೇಕಾಲುವೆ ಗ್ರಾಮದವಳಾಗಿದ್ದು, ಸದ್ಯ ಪೋಷಕರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.