ಹುಬ್ಬಳ್ಳಿ ಡಿ.23: ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೋನಿಯ ಈಶ್ವರ ದೇವಸ್ಥಾನದಲ್ಲಿ ಅಡುಗೆ ಅನಿಲ (ಸಿಲಿಂಡರ್ ) ಸ್ಫೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸಲಾಗುವುದು ಎಂದು ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಬ್ಬಯ್ಯ ಪ್ರಸಾದ ಭರವಸೆ ನೀಡಿದರು.
ಇಂದು ಕರ್ನಾಟಕ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ ( ಕೆಎಂಸಿ&ಆರ್ಐ ) ಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ಬಳಿಕ ಪತ್ರಕರ್ತರೊಂದಿಗೆ ಅವರು ಮಾತನಾಡಿ, ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯದ ಬಗ್ಗೆ ಕೆಎಂಸಿಆರ್ಐ ಸಂಸ್ಥೆಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದೇನೆ. ಸೂಕ್ತ ರೀತಿಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಲಾಗಿದೆ. ಗಾಯಾಳುಗಳಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರ ಒದಗಿಸುವಂತೆ ಖುದ್ದಾಗಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸುತ್ತೇನೆ ಎಂದರು.
SBI Recruitment: ಉದ್ಯೋಗ ಹುಡುಕುತ್ತಿದ್ದೀರಾ..? SBI ಬ್ಯಾಂಕ್ʼನಲ್ಲಿದೆ ಭರ್ಜರಿ ಉದ್ಯೋಗಾವಕಾಶ! ಲಕ್ಷಗಟ್ಟಲೆ ಸಂಬಳ
ಕೆಎಂಸಿಆರ್ಐನಲ್ಲಿ ಐದು ಅಂಬ್ಯುಲೆನ್ಸ್ಗಳಿವೆ. ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡು ಕೆಎಂಸಿಆರ್ಐಗೆ ತೆರಳಲು ಅಂಬ್ಯುಲೆನ್ಸ್ ಒದಗಿಸದೇ ಇರುವುದು ಗಮನಕ್ಕೆ ಬಂದಿದೆ. ಅಲ್ಲದೇ ಅವರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡದೇ ಇರುವುದರ ಬಗ್ಗೆ ಮಾಹಿತಿ ಪಡೆದಿರುವೆ.
ಗಾಯಾಳುಗಳಿಗೆ ಸ್ಪಂದಿಸದಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ. ಆರ್.ಜೆ., ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್, ಡಿಸಿಪಿಗಳಾದ ಮಹಾನಿಂಗ ನಂದಗಾವಿ, ರವೀಶ್ ಸಿ.ಆರ್., ಕೆಎಂಸಿಆರ್ಐ ನಿರ್ದೇಶಕರಾದ ಡಾ.ಎಸ್.ಎಫ್.ಕಮ್ಮಾರ ಸೇರಿದಂತೆ ಅಧಿಕಾರಿಗಳು ಇತರರು ಹಾಜರಿದ್ದರು.