ಖ್ಯಾತ ನಟ ಅಲ್ಲು ಅರ್ಜುನ್ ಮನೆ ಮೇಲೆ ದಾಳಿ ನಡೆಸಿದ್ದು ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧನಕ್ಕೆ ಒಳಗಾಗಿದ್ದ 6 ಆರೋಪಿಗಳಿಗೆ ಹೈದರಾಬಾದ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಅಲ್ಲು ಅರ್ಜುನ್ ಮನೆ ಮೇಲೆ ದಾಳಿ ಮಾಡಿದ್ದ 6 ಮಂದಿಯನ್ನು ಡಿ.22 ಜ್ಯುಬ್ಲಿ ಹಿಲ್ಸ್ ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಇದೀಗ 6 ಆರೋಪಿಗಳಿಗೆ ತಲಾ 10,000 ರೂ. ವೈಯಕ್ತಿಕ ಬಾಂಡ್ ಮೇಲೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ ಎಂದು ಹಿರಿಯ ವಕೀಲ ವಕೀಲ ರಾಮದಾಸ್ ತಿಳಿಸಿದ್ದಾರೆ.
ಇನ್ನೂ ಠಾಣೆಯಲ್ಲಿ ಆರೋಪಿಗಳೆಲ್ಲಾ ಬೆಂಚ್ ಮೇಲೆ ಕುಳಿತು ಮೊಬೈಲ್ನಲ್ಲಿ ಮುಳುಗಿದ್ದ ದೃಶ್ಯಗಳು ವೈರಲ್ ಆಗಿದ್ದು, ಪೊಲೀಸರ ಕಾರ್ಯವೈಖರಿ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗ್ತಿದೆ. ಇದ್ರ ಮಧ್ಯೆ, ಆರೋಪಿಗಳು ನಿಮ್ಮವರೆಂದು ಕಾಂಗ್ರೆಸ್ ಮತ್ತು ಬಿಆರ್ಎಸ್ ಪಕ್ಷಗಳು ಪರಸ್ಪರ ಆರೋಪ, ಪ್ರತ್ಯಾರೋಪಗಳನ್ನು ಮಾಡುತ್ತಿವೆ.
ಆರೋಪಿಗಳಿಗೆ ಸಿಎಂ ಜೊತೆ ಇರುವ ಫೋಟೋಗಳನ್ನು ಬಿಆರ್ಎಸ್ ರಿಲೀಸ್ ಮಾಡಿದೆ. ಇಲ್ಲ ಇವರು ಬಿಆರ್ಎಸ್ ಬೆಂಬಲಿಗರು ಎಂದು ಕಾಂಗ್ರೆಸ್ ಪ್ರತ್ಯಾರೋಪ ಮಾಡಿದೆ. ಇನ್ನೂ ಪುಷ್ಪ ಶೋ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಶೀಘ್ರವೇ ಮುಖ್ಯಮಂತ್ರಿ ರೇವಂತ್ ರೆಡ್ಡಿಯನ್ನು ಭೇಟಿ ಮಾಡಲು ಟಾಲಿವುಡ್ ಗಣ್ಯರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.