ಪುಷ್ಪ 2 ಸಿನಿಮಾದ ಪ್ರೀಮಿಯರ್ ವೇಳೆ ಹೈದರಾಬಾದ್ ನ ಸಂಧ್ಯಾ ಚಿತ್ರಮಂದಿರ ಕಾಲ್ತುಳಿತಕ್ಕೆ ಒಳಗಾಗಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಗೆ ಚಿಕ್ಕಡಪಲ್ಲಿ ಪೊಲೀಸರು ಮತ್ತೊಮ್ಮೆ ನೊಟೀಸ್ ನೀಡಿದ್ದರು. ಕಳೆದ ವಾರವಷ್ಟೆ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಅಲ್ಲು ಅರ್ಜುನ್ ಅನ್ನು ಬಂಧಿಸಿದ್ದರು. ಒಂದು ರಾತ್ರಿ ಜೈಲಿನಲ್ಲಿ ಕಳೆದಿದ್ದ ಅಲ್ಲು ಅರ್ಜುನ್ ಮರು ದಿನ ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು. ಬಳಿಕ ನಿನ್ನೆ ಪೊಲೀಸರು ಮತ್ತೊಮ್ಮೆ ನೊಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದು ಅಲ್ಲು ಅರ್ಜುನ್ ತಮ್ಮ ವಕೀಲರು ಮೂಲಕ ವಿಚಾರಣೆಗೆ ಹಾಜರಾಗಿದ್ದರು.
ಇಂದು (ಡಿಸೆಂಬರ್ 24) ಬೆಳಿಗ್ಗೆ ಚಿಕ್ಕಡಪಲ್ಲಿ ಪೊಲೀಸರ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಮನೆಯಿಂದ ವಿಚಾರಣೆಗೆ ತೆರಳುವ ಮುನ್ನ ಮನೆ ಮುಂದೆ ನೆರೆದಿದ್ದ ಅಭಿಮಾನಿಗಳಿಗೆ ಕೈ ಬೀಸಿ, ಪತ್ನಿ ಹಾಗೂ ಮಕ್ಕಳನ್ನು ತಬ್ಬಿಕೊಂಡು, ತಂದೆ ಅಲ್ಲು ಅರವಿಂದ್ ಹಾಗೂ ಮಾವ ಚಂದ್ರಶೇಖರ ರೆಡ್ಡಿ ಅವರಿಗೆ ಕೈ ಕುಲುಕಿ ವಿಚಾರಣೆಗೆ ತೆರಳಿದರು. ಆದರೆ ಈ ಬಾರಿ ವಕೀಲರ ಸಮ್ಮುಖದಲ್ಲಿ ಅಲ್ಲು ಅರ್ಜುನ್ ಅವರನ್ನು ಪೊಲೀಸರು ವಿಚಾರಣೆ ಎದುರಿಸಿದ್ದಾರೆ.
ಡಿಸೆಂಬರ್ 04 ರಂದು ನಟ ಅಲ್ಲು ಅರ್ಜುನ್ ಪತ್ನಿ, ಮಕ್ಕಳು ಹಾಗೂ ರಶ್ಮಿಕಾ ಮಂದಣ್ಣ ಅವರೊಡನೆ ಸಂಧ್ಯಾ ಚಿತ್ರಮಂದಿರಕ್ಕೆ ‘ಪುಷ್ಪ 2’ ಸಿನಿಮಾ ವೀಕ್ಷಿಸಲು ತೆರಳಿದ್ದರು. ಈ ವೇಳೆ ಭಾರಿ ಸಂಖ್ಯೆಯ ಅಭಿಮಾನಿಗಳು ಸೇರಿದ್ದರು. ಈ ವೇಳೆ ಸಂಭವಿಸಿದ ನೂಕಾಟದಲ್ಲಿ ಒಬ್ಬ ಮಹಿಳೆ ಮೃತಪಟ್ಟದ್ದು ಆಕೆಯ ಮಗ ಗಂಭೀರವಾಗಿ ಗಾಯಗೊಂಡಿದ್ದು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಹಿಳೆಯ ಪತಿ ಅಲ್ಲು ಅರ್ಜುನ್ ಹಾಗೂ ಚಿತ್ರಮಂದಿರದ ಮೇಲೆ ದೂರು ನೀಡಿದ್ದರು.ದೂರಿನ ಅನ್ವಯ ಬಂಧಿಸಿ ವಿಚಾರಣೆ ನಡೆಸಿ ಬಳಿಕ ಜಾಮೀನಿನ ಮೂಲಕ ಬಿಡುಗಡೆ ಮಾಡಿದ್ದರು.