ಬೆಂಗಳೂರು:- ಬಿಜೆಪಿ ಮುಖಂಡ CT ರವಿ ಬಂಧನ ಕೇಸ್ ಗೆ ಸಂಬಧಪಟ್ಟಂತೆ ಬಿಜೆಪಿ ಕಾನೂನು ಹೋರಾಟಕ್ಕಿಳಿದಿದೆ.
ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಬಿಜೆಪಿ ನಾಯಕರು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ ಮಾಡಿ ರಾಜ್ಯ ಸರ್ಕಾರದ ವಿರುದ್ಧ ದೂರು ನೀಡಿದ್ದಾರೆ. ಈ ಪ್ರಕರಣದ ತನಿಖಗೆ ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದ ಬೆನ್ನಲ್ಲೇ ಇತ್ತ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿರುವುದು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ಶಾಸಕರಾದ ಜನಾರ್ದನರೆಡ್ಡಿ, ಸಿ.ಕೆ.ರಾಮಮೂರ್ತಿ, ಎಸ್.ರಘು, ಹಾವೇರಿ ಕ್ಷೇತ್ರದ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ, ಪರಿಷತ್ ಸದಸ್ಯರಾದ ರವಿಕುಮಾರ್, ಕೇಶವ ಪ್ರಸಾದ್ ಅವರು ರಾಜಭವನದಲ್ಲಿ ಗವರ್ನರ್ ಭೇಟಿಯಾಗಿ ಸರ್ಕಾರದ ವಿರುದ್ಧ ದೂರು ನೀಡಿದರು.
ಬಿಜೆಪಿ ಎಂಎಲ್ಸಿ ಸಿಟಿ ರವಿ ಬಂಧನ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಖಂಡನೀಯ. ಬಂಧನದ ವೇಳೆ ಸಾಂವಿಧಾನಿಕ ಹಾಗೂ ಕಾನೂನು ಉಲ್ಲಂಘನೆ ಆಗಿದೆ. ಪೊಲೀಸ್ ಇಲಾಖೆ ಮೂಲಕ ಅಧಿಕಾರ ದುರ್ಬಳಕೆ ಆಗಿದೆ. ರಾಜ್ಯಪಾಲರು ಕೂಡಲೇ ಮಧ್ಯಪ್ರವೇಶ ಮಾಡಿ ಬಂಧನ ಪ್ರಕರಣದಲ್ಲಿ ಸತ್ಯ ಶೋಧನೆ ನಡೆಸಬೇಕು ಎಂದು ಮನವಿ ಸಲ್ಲಿಸಿದೆ.