ಬಳ್ಳಾರಿ:- ಸಿದ್ದರಾಮಯ್ಯ ಸರ್ಕಾರ ನಮ್ಮನ್ನು ಅಪಮಾನ ಮಾಡಿದೆ ಎಂದು ಹೇಳುವ ಮೂಲಕ ಬಸವ ಜಯಮೃತ್ಯುಂಜಯ ಶ್ರೀ ಬೇಸರ ಹೊರ ಹಾಕಿದ್ದಾರೆ.
ವಟ್ಟಮ್ಮನಹಳ್ಳಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಹಳ್ಳಿ ಹಳ್ಳಿಯಲ್ಲಿ ಜಾಗೃತಿ ಮೂಡಿಸಿ ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದೂ ಹೇಳಿದ್ದಾರೆ.
ಜನವರಿ 16ರಿಂದ ಪ್ರತಿ ಹಳ್ಳಿ ಹಳ್ಳಿಗೂ ತೆರಳಿ ಪಂಚಮಸಾಲಿ ಜಾಗೃತಿ ಸಭೆ ನಡೆಸಲಾಗುವುದು. ಮುಂದಿನ 3 ವರ್ಷ ಹೋರಾಟದ ಮೂಲಕ ಜಾಗೃತಿ ಮೂಡಿಸುತ್ತೇವೆ ಎಂದು ಅವರು ಹೇಳಿದರು.
2ಎ ಮೀಸಲಾತಿಗಾಗಿ ಆಗ್ರಹಿಸಿ ಹೋರಾಟ ಮಾಡಿದರೆ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿಸಿದರು. ಸಿಎಂ ಸಿದ್ದರಾಮಯ್ಯ ಸರ್ಕಾರ ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದೆ. ಕಾಂಗ್ರೆಸ್ ಪಕ್ಷ ಪಂಚಮಸಾಲಿ ಸಮಾಜಕ್ಕೆ ಬಹಳ ಅಪಮಾನ ಮಾಡಿದೆ. ಲಾಠಿಚಾರ್ಜ್ ಮಾಡಿರುವ ಪೊಲೀಸರ ವಿರುದ್ಧ ಕ್ರಮ ಕೈಗೊಂಡಿಲ್ಲ. ಸಿದ್ದರಾಮಯ್ಯ ಸರ್ಕಾರ ಈವರೆಗೆ ಪಂಚಮಸಾಲಿಗಳ ಕ್ಷಮೆ ಕೇಳಿಲ್ಲ. ಮೀಸಲಾತಿ ಕೊಡಲು ಆಗಲ್ಲ ಎಂದು ಸಿಎಂ ನೇರವಾಗಿ ಹೇಳಿದ್ದಾರೆ. ನಮ್ಮನ್ನು ಅಪ್ಪಿಕೊಳ್ಳುವ ಸರ್ಕಾರ ತಂದು ಮೀಸಲಾತಿ ಪಡೆಯುತ್ತೇವೆ ಎಂದು ಅವರು ಹೇಳಿದ್ದಾರೆ