ಸ್ಯಾಂಡಲ್ವುಡ್ ಸೆಂಚುರಿ ಸ್ಟಾರ್, ಡಾ. ಶಿವರಾಜ್ಕುಮಾರ್ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮುಗಿದಿದ್ದು, ಅಭಿಮಾನಿಗಳು ನಿರಾಳರಾಗಿದ್ದಾರೆ.
ಮೆಟ್ರೋ ಪ್ರಯಾಣಿಕರಿಗೆ ಸಿಕ್ತು ಗುಡ್ ನ್ಯೂಸ್: ಹೊಸ ವರ್ಷದಿಂದ ಎರಡು ಹೊಸ ರೈಲು ಸೇರ್ಪಡೆ!
ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಭಾರತೀಯ ಕಾಲಮಾನ ಡಿ. 24ರ ಸಂಜೆ 6 ಗಂಟೆಯಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ತಡರಾತ್ರಿಯವರೆಗೆ ಶಸ್ತ್ರಚಿಕಿತ್ಸೆ ಮುಂದುವರಿದಿತ್ತು. ಡಾ. ಮುರುಗೇಶ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
ರಾತ್ರಿ 12ರ ಹೊತ್ತಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದ ವೈದ್ಯರು, ಆಪರೇಷನ್ ಸಕ್ಸಸ್ ಎಂದು ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ. ಸದ್ಯಕ್ಕೆ ಅವರನ್ನು ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡಲಾಗಿದ್ದು, ಅವರನ್ನು ವೈದ್ಯರ ಅವಗಾಹನೆಯಲ್ಲಿ ಇಡಲಾಗಿದೆ. ಡಿ. 25ರ ಬೆಳಗ್ಗೆ ಅವರಿಗೆ ಎಚ್ಚರವಾಗಲಿದ್ದು ಅವರಿಗೆ ಔಷಧೋಪಚಾರ ನಡೆಯಲಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇನ್ನೂ ಜನವರಿ 26ಕ್ಕೆ ಭಾರತಕ್ಕೆ ಶಿವಣ್ಣ ವಾಪಸ್ ಆಗಲಿದ್ದಾರೆ. ಶಿವಣ್ಣ ಜೊತೆ ಗೀತಾ ಶಿವರಾಜ್ಕುಮಾರ್ ಜೊತೆಯಲ್ಲಿ ಇರಲಿದ್ದಾರೆ. ನೆಚ್ಚಿನ ನಟ ಬೇಗ ಗುಣಮುಖರಾಗಿ ಬರಲಿ ಎಂದು ರಾಜ್ಯದ ನಾನಾ ಭಾಗಗಳಲ್ಲಿ ಅಭಿಮಾನಿಗಳು ದೇವಸ್ಥಾನಗಳಲ್ಲಿ ಹೋಮ- ಹವನಗಳನ್ನು ನಡೆಸಿದ್ದಾರೆ. ಸರ್ಜರಿ ಯಶಸ್ವಿಯಾಗಿ, ಆರೋಗ್ಯವಾಗಿ ಶಿವಣ್ಣ ತವರಿಗೆ ಮರಳಲಿ ಎಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ.