ಕ್ರಿಕೆಟ್ ಪ್ರೇಮಿಗಳು ಕುತೂಹಲದಿಂದ ಕಾಯುತ್ತಿದ್ದ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟಗೊಂಡಿದೆ.
ಅನೈತಿಕ ಸಂಬಂಧ: ಹಾಡಹಗಲೇ ವ್ಯಕ್ತಿಗೆ 24 ಬಾರಿ ಕೊಚ್ಚಿ ಕೊಲೆ ಮಾಡಲು ಯತ್ನ!
ಐಸಿಸಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯ ಪ್ರಕಾರ ಈ ಟೂರ್ನಿಯು ಫೆಬ್ರವರಿ 19 ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಕರಾಚಿಯಲ್ಲಿ ನ್ಯೂಜಿಲೆಂಡ್ ಮತ್ತು ಆತಿಥೇಯ ಪಾಕಿಸ್ತಾನ ನಡುವೆ ನಡೆಯಲಿದೆ. ಮಾರ್ಚ್ 9 ರಂದು ಫೈನಲ್ ನಡೆಯಲಿದೆ. ಟೀಂ ಇಂಡಿಯಾ ತನ್ನ ಎಲ್ಲಾ ಪಂದ್ಯಗಳನ್ನು ದುಬೈನಲ್ಲಿ ಆಡಲಿದೆ. ಇದಲ್ಲದೆ ಇಡೀ ಟೂರ್ನಿಯ ಹೈವೋಲ್ಟೇಜ್ ಕದನವಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ದುಬೈನಲ್ಲಿ ಫೆಬ್ರವರಿ 23 ರಂದು ನಡೆಯಲಿದೆ.
ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ:-
19 ಫೆಬ್ರವರಿ, 2025 ಪಾಕಿಸ್ತಾನ vs ನ್ಯೂಜಿಲೆಂಡ್ ಕರಾಚಿ
20 ಫೆಬ್ರವರಿ, 2025 ಭಾರತ vs ಬಾಂಗ್ಲಾದೇಶ ದುಬೈ
21 ಫೆಬ್ರವರಿ, 2025 ಅಫ್ಘಾನಿಸ್ತಾನ vs ದಕ್ಷಿಣ ಆಫ್ರಿಕಾ ಕರಾಚಿ
22 ಫೆಬ್ರವರಿ, 2025 ಆಸ್ಟ್ರೇಲಿಯಾ vs ಇಂಗ್ಲೆಂಡ್ ಲಾಹೋರ್
23 ಫೆಬ್ರವರಿ, 2025 ಪಾಕಿಸ್ತಾನ vs ಭಾರತ ದುಬೈ
24 ಫೆಬ್ರವರಿ, 2025 ಬಾಂಗ್ಲಾದೇಶ vs ನ್ಯೂಜಿಲೆಂಡ್ ರಾವಲ್ಪಿಂಡಿ
25 ಫೆಬ್ರವರಿ, 2025 ಆಸ್ಟ್ರೇಲಿಯಾ vs ದಕ್ಷಿಣ ಆಫ್ರಿಕಾ ರಾವಲ್ಪಿಂಡಿ
26 ಫೆಬ್ರವರಿ, 2025 ಅಫ್ಘಾನಿಸ್ತಾನ vs ಇಂಗ್ಲೆಂಡ್ ಲಾಹೋರ್
27 ಫೆಬ್ರವರಿ, 2025 ಪಾಕಿಸ್ತಾನ vs ಬಾಂಗ್ಲಾದೇಶ ರಾವಲ್ಪಿಂಡಿ
28 ಫೆಬ್ರವರಿ, 2025 ಅಫ್ಘಾನಿಸ್ತಾನ vs ಆಸ್ಟ್ರೇಲಿಯಾ ಲಾಹೋರ್
ಮಾರ್ಚ್ 1, 2025 ದಕ್ಷಿಣ ಆಫ್ರಿಕಾ vs ಇಂಗ್ಲೆಂಡ್ ಕರಾಚಿ
ಮಾರ್ಚ್ 2, 2025 ನ್ಯೂಜಿಲೆಂಡ್ vs ಭಾರತ ದುಬೈ
ಮಾರ್ಚ್ 4, 2025 ಸೆಮಿಫೈನಲ್ 1 ದುಬೈ
ಮಾರ್ಚ್ 5, 2025 ಸೆಮಿಫೈನಲ್ 2 ಲಾಹೋರ್
ಮಾರ್ಚ್ 9, 2025 ಫೈ
2025 ರಲ್ಲಿ ಹೈಬ್ರಿಡ್ ಮಾದರಿಯಲ್ಲಿ ನಡೆಯಲ್ಲಿರುವ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ. ವಾಸ್ತವವಾಗಿ ಈ ಟೂರ್ನಿಯ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಬೇಕಿತ್ತು. ಆದರೆ ಪಂದ್ಯಾವಳಿಯ ಆಯೋಜನೆಗೆ ಸಂಬಂಧಿಸಿದಂತೆ ಭಾರತ ಹಾಗೂ ಆತಿಥೇಯ ಪಾಕಿಸ್ತಾನದ ನಡುವೆ ಉಂಟಾಗಿದ್ದ ಗೊಂದಲಗಳಿಂದಾಗಿ ಈ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲು ಸಾಧ್ಯವಾಗಿರಲಿಲ್ಲ. ಕೊನೆಗೂ ಈ ಎರಡೂ ದೇಶಗಳ ಬೇಡಿಕೆಯಂತೆಯೇ ಪಂದ್ಯಾವಳಿಯನ್ನು ಆಯೋಜಿಸುವ ನಿರ್ಧಾರಕ್ಕೆ ಬಂದಿದ್ದ ಐಸಿಸಿ ಇದೀಗ ಈ ಮಹತ್ವದ ಟೂರ್ನಿಯ ವೇಳಾಪಟ್ಟಿಯನ್ನು ಬಿಡುಗಡೆಗೊಳಿಸಿದೆ.