ಬೆಂಗಳೂರು:- ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಪಾಲಿಕೆ ಹೊಸ ಪ್ಲಾನ್ ಮಾಡಿದೆ.
Champions Trophy: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಪ್ರಕಟ: ಭಾರತ- ಪಾಕ್ ಪಂದ್ಯ ಯಾವಾಗ?
ದೆಹಲಿ ಮೂಲದ ಖಾಸಗಿ ಕಂಪನಿ ಜೊತೆ ಕೈಜೋಡಿಸಿರುವ ಪಾಲಿಕೆ ಹೊಸ ಡಿಪಿಆರ್ ಸಿದ್ಧಪಡಿಸಿದ್ದು, ಇದರಲ್ಲಿ ರಾಜಧಾನಿಯ ಸಂಚಾರ ವ್ಯವಸ್ಥೆ ಹಾಗೂ ಟ್ರಾಫಿಕ್ ಕಂಟ್ರೋಲ್ಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ಸಿದ್ಧವಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಜನರನ್ನೂ ಬಿಟ್ಟೂಬಿಡದೆ ಕಾಡುತ್ತಿದೆ. ಬೆಂಗಳೂರಿಗರ ಅರ್ಧಜೀವನ ಟ್ರಾಫಿಕ್ನಲ್ಲೇ ಕಳೆದುಹೋಗುತ್ತಿದ್ದು, ಇತ್ತ ಬ್ರ್ಯಾಂಡ್ ಬೆಂಗಳೂರಿನ ಟ್ರಾಫಿಕ್ ಕಿರಿಕಿರಿಗೆ ಬ್ರೇಕ್ ಹಾಕಲು ಪಾಲಿಕೆ ಹೊಸ ಯೋಜನೆ ರೂಪಿಸಲು ಸಜ್ಜಾಗಿದೆ.
ಹೊಸ ಡಿಪಿಆರ್ನಲ್ಲಿ ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಫ್ಲೈ ಓವರ್ಗಳ ನಿರ್ಮಾಣ, ಟನಲ್ ರೋಡ್ಗಳನ್ನು ನಿರ್ಮಿಸಿದರೆ ಟ್ರಾಫಿಕ್ ಸಮಸ್ಯೆಗೆ ಸ್ವಲ್ಪ ಮಟ್ಟಿನ ಮುಕ್ತಿ ಸಿಗಬಹುದು ಎಂದು ಉಲ್ಲೇಖಿಸಲಾಗಿದೆ. ಇದಕ್ಕಾಗಿ ಬರೋಬ್ಬರಿ 54 ಕೋಟಿ ರೂ. ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಸದ್ಯ ಹೊಸ ಡಿಪಿಆರ್ ಪ್ರಕಾರ ರಾಜಧಾನಿಯ ವಿವಿಧ ಸ್ಥಳಗಳಲ್ಲಿ ಫ್ಲೈ ಓವರ್, ಅಂಡರ್ ಪಾಸ್ ನಿರ್ಮಾಣಕ್ಕೆ ಸೂಚಿಸಲಾಗಿದೆ.
ಕಳೆದ ಬಾರಿ ರಾಜ್ಯ ಸರ್ಕಾರ ಹಾಗೂ ಬಿಬಿಎಂಪಿ ಬಜೆಟ್ಗಳ ಪ್ರಕಾರ ಹಲವು ಯೋಜನೆಗಳಿಗೆ ಡಿಪಿಆರ್ ಸಿದ್ಧಮಾಡಲಾಗಿತ್ತು. ಇತ್ತ ಡಿಸಿಎಂ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಕೂಡ ಕೆಲವು ಯೋಜನೆಗಳ ಮೂಲಕ ರಾಜಧಾನಿಯ ಟ್ರಾಫಿಕ್ ಕಂಟ್ರೋಲ್ ಭರವಸೆ ನೀಡಿದ್ದರು. ಇದೀಗ ಆ ಭರವಸೆಗಳು ಈಡೇರುವ ಮೊದಲೇ ಪಾಲಿಕೆ ಇನ್ನೊಂದು ಡಿಪಿಆರ್ ಸಿದ್ಧಪಡಿಸಿಕೊಂಡಿದೆ.