ಕೋಲಾರ: ಇಬ್ಬರ ಮಕ್ಕಳನ್ನು ಕತ್ತು ಹಿಸುಕಿ ಕೊಂದ ತಾಯಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೋಲಾರ ಜಿಲ್ಲೆ ಕೆಜಿಎಫ್ ತಾಲ್ಲೂಕಿನ ಕಮ್ಮಸಂದ್ರದಲ್ಲಿ ನಡೆದಿದೆ. ತಿಪ್ಪಮ್ಮ(30) ತನ್ನ ಇಬ್ಬರು ಮಕ್ಕಳನ್ನ ಕುತ್ತಿಗೆ ಹಿಸುಕಿ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡ ತಾಯಿ ಆಗಿದ್ದು, ಮೌನೀಶ (7), ನಿತಿನ್ (4) ತಾಯಿ ಯಿಂದಲೆ ಕೊಲೆಯಾದ ಮಕ್ಕಳಾಗಿದ್ದಾರೆ.
ಮಕ್ಕಳ ಕತ್ತು ಹಿಸುಕಿ ಕೊಲೆಗೈದು ನಂತರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬೆಮೆಲ್ ನಗರ ಠಾಣೆಯ ಪೊಲೀಸರು, ಪತಿ ಮಣಿ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.