ಬೀದರ್: ಸಚಿವ ಪ್ರಿಯಾಂಕ್ ಖರ್ಗೆ ಆಪ್ತನಿಂದ ಕೊಲೆ ಬೆದರಿಕೆ ಆರೋಪ ಮಾಡಿ ಏಳು ಪುಟಗಳ ಸಮಗ್ರವಾದ ಲೆಟರ್ ಬರೆದು ಗುತ್ತಿಗೆದಾರ ಸೂಸೈಡ್ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ರೈಲ್ವೆ ಟ್ರಾಕ್ ನಲ್ಲಿ ನಡೆದಿದೆ. ಸಚಿನ್ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ದುರ್ಧೈವಿಯಾಗಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಆಪ್ತನ ಮೇಲೆ ಗಂಭೀರ ಆರೋಪ ಬಂದಿದ್ದು. ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಬೀದರ್ ಜಿಲ್ಲೆಯೆ ಭಾಲ್ಕಿ ತಾಲೂಕಿನ ಕಟ್ಟಿತೂಂಗಾವ್ ಗ್ರಾಮದ ಸಚಿನ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದು. 7 ಪುಟಗಳ ಸಮಗ್ರ ಡೆತ್ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದರ ನಡುವೆ ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ. ಟೆಂಡರ್ ಕೊಡುವ ನೆಪದಲ್ಲಿ ಗುತ್ತಿಗೆದಾರ ಸಚಿನ್ನಿಂದ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರ್ ಗುತ್ತಿಗೆ ದಾರನಿಗೆ ವಂಚಿಸಿದ್ದನು. ಬಳಿಕ ಮತ್ತೆ ಗುತ್ತಿಗೆದಾರನಿಗೆ 1 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದನು ಮತ್ತು ಅದನ್ನು ನೀಡದಿದ್ದರೆ ಕೊಲೆ ಮಾಡುವ ಬೆದರಿಕೆ ಹಾಕಿದ್ದನು.
ನಿಮಗೆ ಈ ಸಮಸ್ಯೆಗಳಿದ್ಯಾ..? ಹಾಗಾದ್ರೆ ದಿನಕ್ಕೊಂದು ಗೆಣಸು ತಿನ್ನಿ, ಆಮೇಲೆ ಮ್ಯಾಜಿಕ್ ನೋಡಿ!
ಇವೆಲ್ಲದರಿಂದ ಭಯಗೊಂಡಿದ್ದ ಸಚಿನ್ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದು. ಸಾವಿಗೂ ಮುನ್ನ ಸುಮಾರು 7 ಪುಟಗಳ ಸುದೀರ್ಘ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್ ನೋಟ್ನಲ್ಲಿ ಕಲಬುರಗಿಯ ಮಾಜಿ ಕಾರ್ಪೊರೇಟ್ ರಾಜು ಕಪನೂರು, ನಂದಕುಮಾರ್ ನಾಗಭುಜಂಗೆ, ಗೋರಖನಾಥ್ ಸೇರಿ 6 ಜನರ ವಿರುದ್ದ ಜೀವ ಬೆದರಿಕೆ ಆರೋಪ ಮಾಡಿದ್ದಾರೆ. ಕುಟುಂಬಸ್ಥರ ವಿರೋದದ ಮಧ್ಯೆಯೆ ಮೃತದೇಹವನ್ನು ಬೀದರ್ನ ಬ್ರೀಮ್ಸ್ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಿದ್ದು. ಬೀದರ್ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.