ಬೆಳಗಾವಿ:- ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರಿದಿದ್ದು, ವೈದ್ಯರ ನಿರ್ಲಕ್ಷ್ಯಕ್ಕೆ ಮತ್ತೋರ್ವ ಬಾಣಂತಿ ಮಹಿಳೆ ಸಾವನ್ನಪ್ಪಿದ್ದಾರೆ.
Health Tips: ಕಾಳು ಮೆಣಸಿನಿಂದಾಗುವ ಬೆನಿಫಿಟ್ ಬಗ್ಗೆ ನಿಮಗೆಷ್ಟು ಗೊತ್ತು?
25 ವರ್ಷದ ಪೂಜಾ ಅಡಿವೆಪ್ಪ ಖಡಕಬಾವಿ ಮೃತ ಬಾಣಂತಿ. ಮಗಳ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಡಿ. 24 ರಂದು ಪೂಜಾ ದಾಖಲಾಗಿದ್ದರು. ನಿನ್ನೆ ಮಧ್ಯಾಹ್ನ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬಳಿಕ ಫಿಟ್ಸ್ ಬಂದು ಮೃತಪಟ್ಟಿರುವುದಾಗಿ ಪೂಜಾ ಸಂಬಂಧಿಕರಿಗೆ ಆಸ್ಪತ್ರೆ ವೈದ್ಯರು ಹೇಳಿದ್ದಾರೆ. ಬಳಿಕ ಪೋಸ್ಟ್ಮಾರ್ಟಮ್ ನಡೆಸದೇ ತರಾತುರಿಯಲ್ಲಿ ಬಾಣಂತಿ ಶವಕೊಟ್ಟು ವೈದ್ಯರು ಕಳಿಸಿದ್ದಾರೆ ಎನ್ನಲಾಗಿದೆ.