ಬೆಂಗಳೂರು:- ಕರ್ನಾಟಕ ಜನರ ತೆರಿಗೆ ಹಣ ಬಳಸಿಕೊಂಡು ಕಾಂಗ್ರೆಸ್ ಮಹಾಧಿವೇಶನ ನಡೆಸಲಾಗುತ್ತದೆ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ.
ಸತ್ತ ಕೋಳಿ ಬಾಯಿಯಿಂದ ಬಂತು ಬೆಂಕಿ: ಬೆಚ್ಚಿ ಬಿದ್ದ ಗ್ರಾಮಸ್ಥರು! ಅಷ್ಟಕ್ಕೂ ನಡೆದಿದ್ದೇನು?
ಈ ಸಂಬಂಧ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ರಾಜ್ಯದ ಜನರ ಕೋಟಿಗಟ್ಟಲೆ ತೆರಿಗೆ ಹಣವನ್ನು ಬಳಸಿಕೊಂಡು ಬೆಳಗಾವಿಯಲ್ಲಿ ಮಹಾಧಿವೇಶನ ಮಾಡಲು ಹೊರಟಿದೆ. ನಕಲಿ ಕಾಂಗ್ರೆಸ್ಸಿನ ಈ ನೀತಿಯ ವಿರುದ್ಧ ಹಾಗೂ ಬೆಳಗಾವಿಯಲ್ಲಿ ಕಾಂಗ್ರೆಸ್ ಮಹಾಧಿವೇಶನವನ್ನು ವಿರೋಧಿಸಿ ನಾಳೆ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ ನಡೆಸಲಿದ್ದೇವೆ ಎಂದರು.
ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಸಂವಿಧಾನಶಿಲ್ಪಿ ಬಾಬಾಸಾಹೇಬ ಅಂಬೇಡ್ಕರ್ ಅವರನ್ನು ಹೆಚ್ಚು ಹೆಚ್ಚಾಗಿ ಸ್ಮರಿಸಿಕೊಳ್ಳುತ್ತಿದೆ. ಆದರೆ, ಹಿಂದೆ ಕಾಂಗ್ರೆಸ್ ಪಕ್ಷವು ಅವಕಾಶ ಸಿಕ್ಕಿದಾಗಲೆಲ್ಲ ಬಾಬಾಸಾಹೇಬ ಅಂಬೇಡ್ಕರರನ್ನು ನಿಂದಿಸುತ್ತ, ಅವಮಾನಿಸುತ್ತ ಬಂದಿತ್ತು ಎಂದು ವಿಜಯೇಂದ್ರ ಆಕ್ಷೇಪಿಸಿದರು.