ಚಿಕ್ಕಬಳ್ಳಾಪುರ:- ಚಿಕ್ಕಬಳ್ಳಾಪುರದ ಹುನೇಗಲ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಸಿಎನ್ಜಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಕ್ಯಾಂಟರ್ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಜರುಗಿದೆ.
ಹುನೇಗಲ್ ಬಳಿ ಯೂ ಟರ್ನ್ ಪಡೆಯಲು ನಿಂತಿದ್ದ ಸಿಎನ್ಜಿ ಸಿಲಿಂಡರ್ ತುಂಬಿದ್ದ ಲಾರಿಗೆ, ಕಲ್ಲು ದಿಮ್ಮೆಗಳನ್ನ ಸಾಗಿಸುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸಿಎನ್ಜಿ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಭಾರೀ ಪ್ರಮಾಣದ ಸ್ಫೋಟ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ನರಸಿಂಹಮೂರ್ತಿ ಹಾಗೂ ಮಾದಪ್ಪ ಎಂಬವರಿಗೆ ಸುಟ್ಟ ಗಾಯಗಳಾಗಿವೆ. ಘಟನೆಯಿಂದ ಹುನೇಗಲ್ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿ ಆಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.