ಬೆಂಗಳೂರು:- ಮಾರ್ಚ್ 1 ರಿಂದ 8 ರವರೆಗೆ ಬೆಂಗಳೂರಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಭಾರತದಲ್ಲಿ ಚೀನಿ ವೈರಸ್ ಅಬ್ಬರ: ಭಾರತದ ಈ ರಾಜ್ಯಗಳಲ್ಲೂ ಎಚ್ಎಂಪಿವಿ ವೈರಸ್ ಪತ್ತೆ!
ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜನೆ ಕುರಿತು ಪತ್ರಿಕಾಗೋಷ್ಠಿ ನಡೆಯಿತು. ’16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಮಾರ್ಚ್ 1ರಿಂದ 8ರ ವರೆಗೆ ನಡೆಯಲಿದೆ. ಈ ವರ್ಷದ ಚಲನಚಿತ್ರೋತ್ಸವದ ಥೀಮ್ ʻಸರ್ವ ಜನಾಂಗದ ಶಾಂತಿಯ ತೋಟʼ ಆಯ್ಕೆ ಮಾಡಲಾಗಿದೆ. ಕಳೆದ ವರ್ಷ ʻಸಾಮಾಜಿಕ ನ್ಯಾಯʼ ಥೀಮ್ನಲ್ಲಿ ಚಲನಚಿತ್ರೋತ್ಸವ ಆಯೋಜಿಸಲಾಗಿತ್ತು ಎಂದರು.
ಸರ್ವ ಜನಾಂಗದ ಶಾಂತಿಯ ತೋಟ’ ಥೀಮ್ ಅಡಿ ಈ ವರ್ಷ ಚಲನಚಿತ್ರೋತ್ಸವ ನಡೆಯಲಿದೆ.
ಚಲನಚಿತ್ರೋತ್ಸವ ಮಾರ್ಚ್ 1ರಿಂದ ಮಾರ್ಚ್ 8ರವರೆಗೆ ನಡೆಯಲಿದೆ. ಈ ವರ್ಷ ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಥೀಮ್ನಲ್ಲಿ ಚಲನಚಿತ್ರೋತ್ಸವ ನಡೆಯುತ್ತಿದೆ ಎಂದು ತಿಳಿಸಿದರು.
60 ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳು 13 ಚಿತ್ರಮಂದಿರದಲ್ಲಿ ಪ್ರದರ್ಶನ ಆಗಲಿವೆ. ಒಟ್ಟು 400 ಶೋಗಳು ಇರಲಿವೆ. ಬೆಂಗಳೂರು ನಾಗರಿಕರಿಗೆ ಬೇರೆ ಬೇರೆ ದೇಶ, ಭಾಷೆ ನೋಡೋ ಅವಕಾಶ ಸಿಗಲಿದೆ. ಬೆಂಗಳೂರು ನಾಗರೀಕರಿಗೆ ಸುವರ್ಣ ಅವಕಾಶ ಅಂತ ತಿಳಿಸಿದರು.