ಬೆಂಗಳೂರು: ಕಚ್ಚಾ ತೈಲಗಳಾದ ಪೆಟ್ರೋಲ್ ಡೀಸೆಲ್ ಕೂಡ ಬೆಲೆಗಳಲ್ಲಿ ಏರಿಳಿತಕ್ಕೊಳಗಾಗುತ್ತಿದ್ದು, ದಿನಂಪ್ರತಿ ಬಳಕೆಯಾಗುವ ಈ ಇಂಧನಗಳು ಒಮ್ಮೊಮ್ಮೆ ಬೆಲೆ ಏರಿಸಿಕೊಂಡಿರುವುದು ವಾಹನ ಚಾಲಕರಿಗೆ ತಲೆನೋವಿನ ಸಮಸ್ಯೆಯಾಗಿದೆ. ನವೀಕರಿಸಲಾಗದೇ ಇರುವ ಇಂಧನಗಳಾಗಿ ಗುರುತಿಸಿಕೊಂಡಿರುವ ಪೆಟ್ರೋಲ್, ಡೀಸೆಲ್ ಅನ್ನು ಹಲವಾರು ಪ್ರಕ್ರಿಯೆಗಳ ಮೂಲಕ ಶುದ್ಧೀಕರಿಸಿ ಬಳಕೆಗೆ ಲಭ್ಯವಾಗಿಸಲಾಗುತ್ತದೆ.
ಇಂದು ಅನೇಕ ನಗರಗಳಲ್ಲಿ ತೈಲದ ಚಿಲ್ಲರೆ ಬೆಲೆಗಳು ಹೆಚ್ಚಾಗುತ್ತಿವೆ. ಆದರೆ, ಇಂದಿಗೂ ದೇಶದ ನಾಲ್ಕೂ ಮಹಾನಗರಗಳಲ್ಲಿ ತೈಲ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ನೀವೇನಾದ್ರೂ ಕುರಿ ಸಾಕಾಣಿಕೆ ಮಾಡಿದ್ರೆ ತಿಂಗಳಿಗೆ 1 ಲಕ್ಷ ಆದಾಯ ಗಳಿಕೆ ಮಾಡಬಹುದು.! ಹೇಗೆ ಗೊತ್ತಾ..?
ಇಂದು ಪೆಟ್ರೋಲ್ ಲೀಟರ್ಗೆ 19 ಪೈಸೆ ಇಳಿಕೆಯಾಗಿ 94.42 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 22 ಪೈಸೆ ಇಳಿಕೆಯಾಗಿ 87.47 ರೂ. ಅದೇ ಸಮಯದಲ್ಲಿ, ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ 32 ಪೈಸೆ ಇಳಿಕೆಯಾಗಿ 104.27 ರೂ.ಗೆ ಮತ್ತು ಡೀಸೆಲ್ ಲೀಟರ್ಗೆ 32 ಪೈಸೆ ಇಳಿಕೆಯಾಗಿ 90.80 ರೂ.ಗೆ ತಲುಪಿದೆ.
ಛತ್ತೀಸ್ಗಢ, ಗೋವಾ, ಗುಜರಾತ್, ಹರಿಯಾಣ, ರಾಜಸ್ಥಾನ, ತಮಿಳುನಾಡು ಮತ್ತು ತ್ರಿಪುರಾದಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಯಾಗಿದೆ. ಮತ್ತೊಂದೆಡೆ, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಕರ್ನಾಟಕ, ಒಡಿಶಾ, ಪುದುಚೇರಿ, ಪಂಜಾಬ್ ಮತ್ತು ಪಶ್ಚಿಮ ಬಂಗಾಳದಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಏರಿಕೆಯಾಗಿದೆ.