ಬೆಂಗಳೂರು: ಹಣವನ್ನು ನೀಡಿ ಶರಣಾಗತಿ ಮಾಡಿಸುವುದನ್ನು ನಾವು ವಿರೋಧಿಸುತ್ತೇವೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಕ್ಸಲ್ ಚಿಂತನೆಗೆ ಬೆಂಬಲ ಸಿಗದೇ ಇದ್ದಾಗ ಸಿದ್ದರಾಮಯ್ಯ ಸರ್ಕಾರ ಪ್ಯಾಕೇಜ್ ಆಸೆಯ ಚಿಗುರು ಹೊರಡಿಸಿದೆ.
ಹಣವನ್ನು ನೀಡಿ ಶರಣಾಗತಿ ಮಾಡಿಸುವುದನ್ನು ನಾವು ವಿರೋಧಿಸುತ್ತೇವೆ. ಬಡವರಿಗೆ ನೆರವು ಕೊಡದೇ ಬಂದೂಕುಗಳು ಹಿಡಿದವರಿಗೆ ನೆರವು ಕೊಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ರಾಮೇಶ್ವರ ಕಫೆಗೆ ಬಾಂಬ್ ಇಟ್ಟವರನ್ನು ಹಾಗೂ ಪೊಲೀಸ್ ಸ್ಟೇಷನ್ ಗೆ ಬೆಂಕಿ ಇಟ್ಟವರನ್ನ ಶರಣಾಗತಿ ಆದರೆ ಬಿಡ್ತಾರಾ? ಶರಣಾಗತಿಗೂ ಮೊದಲೇ ಎ, ಬಿ,ಸಿ ಎಂದು ಪ್ಯಾಕೇಜ್ ಘೋಷಣೆ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರ ಮನೆಯಲ್ಲೇ ಶರಣಾಗತಿ ಆಗುತ್ತದೆ ಅಂದ್ರೆ ಅದಕ್ಕಿಂತ ದೊಡ್ಡ ದುರಂತ ಯಾವುದು ಇಲ್ಲ ಎಂದು ಹೇಳಿದರು.