ಉಡುಪಿ: ಆರು ಮಂದಿ ನಕ್ಸಲರ ಶರಣಾಗತಿ ಆಗಲು ಕಾಡಿನಿಂದ ಹೊರಬಂದಿದ್ದಾರೆ. ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ನಕ್ಸಲರು ಆಗಮಿಸಿದ್ದಾರೆ. ಸಮಾಜದ ಮುಖ್ಯವಾಹಿನಿ ಹೆಸರಲ್ಲಿ ಶರಣಾಗತಿ ಆಗುತ್ತಿದ್ದು, ಜಿಲ್ಲಾಧಿಕಾರಿ ಕಚೇರಿಯತ್ತ ಅವರನ್ನು ಕರೆದುಕೊಂಡು ಬರುವ ಕೆಲಸ ಆಗುತ್ತಿದೆ.
ಇನ್ನೂ ಕೆಲ ತಿಂಗಳ ಮೊದಲು ಪೊಲೀಸರ ಜೊತೆ ನಡೆದ ಎನ್ಕೌಂಟರ್ ನಲ್ಲಿ ಬಲಿಯಾದ ನಕ್ಸಲ್ ನಾಯಕ ವಿಕ್ರಂಗೌಡನ ಸಹೋದರಿ ಸುಗುಣ ಪ್ರತಿಕ್ರಿಯೇ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾವು ಕಷ್ಟದಲ್ಲಿದ್ದೇವೆ ಸ್ವಂತ ಮನೆಯಾಗಬೇಕಿದೆ. ಒಂದು ದಿನ ಕೆಲಸಕ್ಕೆ ಹೋಗದೆ ಇದ್ದರೆ ನಮ್ಮ ದಿನ ಸಾಗೋದಿಲ್ಲ ಎಂದು ತಮ್ಮ ಅಳಲು ತೋಡಿಕೊಂಡರು.
ಸರೆಂಡರ್ ಆಗುವ ನಕ್ಸಲರಿಗೆ ಕೊಡುವ ಪರಿಹಾರವನ್ನು ನಮಗೂ ಕೊಡಿ ಸಾಕು. ನನ್ನ ಅಣ್ಣನ ಜೀವ ಕೊಡಲು ಸಾಧ್ಯವಿಲ್ಲ. ಎನ್ಕೌಂಟರ್ ಆಗಿದೆ, ಅವರ ಜೀವ ಹೋಗಿಯಾಗಿದೆ. ಉಳಿದವರಿಗೆ ಕೊಡುವ ಪರಿಹರ ನಮಗೆ ಕೊಟ್ಟರೆ ಸಾಕು. ನಾವು ಕಷ್ಟದಲ್ಲಿದ್ದೇವೆ ಎಂದು ಸುಗುಣ ಹೇಳಿದರು.