ಬೆಂಗಳೂರು:- ದಶಕಗಳ ಕಾಲ ಕಾಡಿನಲ್ಲಿ ಬಂದೂಕು ಹಿಡಿದು ಬದುಕುತ್ತಿದ್ದ ನಕ್ಸಲರು ಸರ್ಕಾರದ ಎದುರು ಶರಣಾಗಿದ್ದು ಹೊಸ ಸಂಕ್ರಮಣ ಆಗಿದೆ. 4 ರಾಜ್ಯಗಳಿಗೆ ಬೇಕಾಗಿದ್ದ ಮೋಸ್ಟ್ ವಾಂಟೆಂಡ್ ನಕ್ಸಲರು ಮಂಡಿಯೂರಿದ್ದು ಇದರೊಂದಿಗೆ ಕರ್ನಾಟಕದಲ್ಲಿ ನಕ್ಸಲರ ಯುಗಾಂತ್ಯವಾಗಿದೆ.
ಕೋಲಾರ: ಲಂಚ ಪಡೆಯದೆ ಅಂಗನವಾಡಿ ಕಾರ್ಯಕರ್ತರು ಪ್ರಾಮಾಣಿಕತೆಯಿಂದ ಕೆಲಸ ಮಾಡಿ ಶಾಸಕ ಕೊತ್ತೂರು ಮಂಜುನಾಥ್
ಭೂಗತರಾಗಿದ್ದ ನಕ್ಸಲರಿಗೆ ಈಗ ಶಾಂತಿಯ ಮಂತ್ರೋಪದೇಶ ಆಗಿದೆ. ಹಲವು ವರ್ಷಗಳಿಂದ ಅಡವಿಯೊಳಗೆ ಅಡಗಿ ಕುಳಿತು ಸಂಘರ್ಷದ ಹಾದಿ ತುಳಿದಿದ್ದವರಿಗೆ ಪ್ರಾಯಶ್ಚಿತ್ತವಾಗಿದೆ. 4 ದಶಕಗಳ ಬಳಿಕ ಕರ್ನಾಟಕ ನಕ್ಸಲ್ ಮುಕ್ತ ಆಗುವ ಮುನ್ನುಡಿ ಬರೆದಿದೆ.
ಆರು ನಕ್ಸಲರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ ಜಿ ಪರಮೇಶ್ವರ್ ಸಮ್ಮುಳದಲ್ಲೇ ಶರಣಾಗಿದ್ದಾರೆ. ಇನ್ನು ಶರಣಾದ ನಕ್ಸಲರಿಗೆ ಸಿಎಂ, ಸಂವಿಧಾನದ ಪುಸ್ತಕ ನೀಡಿದರು. ಈ ಮೂಲಕ ಕರ್ನಾಟಕ ನಕ್ಸಲ ಮುಕ್ತ ರಾಜ್ಯ ಎಂದು ವ್ಯಾಖ್ಯಾನಿಸಬಹುದು.
ಆರು ನಕ್ಸಲರಾದ ಶೃಂಗೇರಿ ತಾಲೂಕಿನ ಮುಂಡುಗಾರು ಗ್ರಾಮದ ಲತಾ, ಕಳಸ ತಾಲೂಕಿನ ಬಾಳೆಹೊಳೆ ಗ್ರಾಮದ ವನಜಾಕ್ಷಿ, ದಕ್ಷಿಣ ಕನ್ನಡ ಜಿಲ್ಲೆ ಕುಂತಲೂರು ಮೂಲಕದ ಸುಂದರಿ, ರಾಯಚೂರು ಮೂಲದ ಮಾರಪ್ಪ ಅರೋಳಿ, ವಸಂತ, ಎನ್.ಜೀಶಾ ಹಲವು ವರ್ಷಗಳ ಸಶಸ್ತ್ರ ಹೋರಾಟಕ್ಕೆ ಗುಡ್ಬೈ ಹೇಳಿ ಮುಖ್ಯವಾಹಿನಿಗೆ ಬಂದಿದ್ದಾರೆ. ಈ ವೇಳೆ ಡಿಜಿ ಐಜಿಪಿ ಅಲೋಕ್ ಮೋಹನ್, ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಶರಣಾಗತಿಯಾದ ಆರು ನಕ್ಸಲರ ಕುಟುಂಬದವರು ಉಪಸ್ಥಿತರಿದ್ದರು.
ಇನ್ನು ತಮ್ಮ ಸಮ್ಮುಖದಲ್ಲೇ ಮುಖ್ಯವಾಹಿನಿ ಬಂದಿರುವ ನಕ್ಸಲರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಭ ನಡೆಸಿದ್ದು, ಅವರ ಸಮಸ್ಯೆ, ಬೇಡಿಕೆಗಳನ್ನು ಆಲಿಸಿದ್ದಾರೆ. ಅಲ್ಲದೇ ಅವರ ಪ್ರೋತ್ಸಾಹ ಧನದ ಚರ್ಚಿಸಿದ್ದಾರೆ.
ಶಾಂತಿಗಾಗಿ ನಾಗರಿಕ ವೇದಿಕೆ ಸದಸ್ಯರ ಜೊತೆ ನಕ್ಸಲರು ಚರ್ಚಿಸಿ ಮುಖ್ಯವಾಹಿನಿಗೆ ಬರಲು ಇಂಗಿತ ವ್ಯಕ್ತಡಿಸಿದ್ದರು. ಈ ಮೂಲಕ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮುಂದೆ ಶರಣಾಗತಿಗೆ ಎಲ್ಲಾ ಮಾತುಕತೆ ಆಗಿತ್ತು. ಆದ್ರೆ, ಕೊನೆ ಕ್ಷಣದಲ್ಲಿ ಸಿಎಂ ಸಿದ್ದರಾಮಯ್ಯ ಮುಂದೆ ಶರಣಾಗಲು ತೀರ್ಮಾನಿಸಿದ್ದು, ಅದರಂತೆ ಇಂದು(ಜನವರಿ 08) ಬೆಳಗ್ಗೆ ಪೊಲೀಸ್ ಬಂದೋಬಸ್ತ್ನಲ್ಲಿ. ಶೃಂಗೇರಿಯಿಂದ ಹೊರಟ ನಕ್ಸಲರ ತಂಡ ಚಿಕ್ಕಮಗಳೂರಿನಲ್ಲಿ ಮಾತುಕತೆ ಮುಗಿಸಿ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು. ಸಂಜೆ 6 ಗಂಟೆ ಹೊತ್ತಿಗೆ ಸಿಎಂ ಗೃಹ ಕಚೇರಿ ಕೃಷ್ಣಗೆ ತಲುಪಿತು. ಆ ತಂಡವನ್ನು ಚೆಕ್ ಇನ್ ಮಾಡಿ ಪೊಲೀಸರು ಒಳಗೆ ಬಿಟ್ಟರು