ಬೀದರ್:- ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ವಿರುದ್ಧ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಬೀದರ್ ಬಂದ್ ಗೆ ಕರೆ ಕೊಡಲಾಗಿದ್ದು, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕೋಲಾರ – ಅಂಗಡಿಗಳ ನಾಮಫಲಕಗಳಲ್ಲಿ ಶೇ 60 ರಷ್ಟು ಕನ್ನಡ ಭಾಷೆ ಬಳಸುವಂತೆ ಕರವೇ ಡಿಸಿಗೆ ಮನವಿ!
ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ದಲಿತಪರ ಸಂಘಟನೆಗಳಿಂದ ಬೀದರ್ ನಗರ ಬಂದ್ಗೆ ಕರೆ ನೀಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಬೀದರ್ ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಉಪನಿರ್ದೇಶಕರು ಶಿಕ್ಷಣ ಇಲಾಖೆ ಡಿಡಿಪಿಐ ಎಸ್.ಎಲ್.ಪ್ರಸನ್ನ ಕುಮಾರ್ ಆದೇಶ ಹೊರಡಿಸಿದ್ದಾರೆ.
ಹಾಸನದಲ್ಲಿ ಕೂಡ ವಿವಿಧ ಸಂಘಟನೆಗಳಿಂದ ಇಂದು ಪ್ರತಿಭಟನೆ ಮಾಡಲಾಗಿದೆ. ದಲಿತ ಹಾಗೂ ಪ್ರಗತಿ ಪರ ಸಂಘಟನೆಗಳ ನೇತೃತ್ವದಲ್ಲಿ ಹಾಸನದ ಕಸ್ತೂರವಳ್ಳಿ ಗೇಟ್ ಬಳಿ ಧರಣಿ ನೂರಾರು ಜನರು ಹೆದ್ದಾರಿ ತಡೆ ಪ್ರತಿಭಟನೆ ಮಾಡಿದ್ದಾರೆ.
ಕೇಂದ್ರ ಸಂಪುಟದಿಂದ ಅಮಿತ್ ಶಾ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 75 ರದಲ್ಲಿ ಪ್ರತಿಭಟನೆ ಮಾಡಲಾಗಿದ್ದು, ಪ್ರತಿಭಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.