ಶ್ರೀನಗರ ಕಿಟ್ಟಿ, ರಚಿತಾ ರಾಮ್ ನಟನೆಯ ನಾಗಶೇಖರ್ ನಿರ್ದೇಶನದ ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಬಿಡುಗಡೆ ಕೊನೆ ಕ್ಷಣದಲ್ಲಿ ಕ್ಯಾನ್ಸಲ್ ಆಗಿದೆ. ಇಂದು ಸಿನಿಮಾ ಬಿಡುಗಡೆ ಮಾಡಲು ಚಿತ್ರತಂಡ ಸಿದ್ಧತೆ ಮಾಡಿಕೊಂಡಿತ್ತು. ಆದರೆ ಅಂತಿಮ ಹಂತದಲ್ಲಿ ಸಿನಿಮಾದ ಬಿಡುಗಡೆಗೆ ವಿಘ್ನ ಎದುರಾಗಿದೆ
ಈ ಹಿಂದೆ ಬಿಡುಗಡೆ ಆಗಿದ್ದ ಸಂಚು ವೆಡ್ಸ್ ಗೀತಾ ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೇ ಕಾರಣದಿಂದ ‘ಸಂಜು ವೆಡ್ಸ್ ಗೀತಾ 2’ ಚಿತ್ರ ಮೇಲೆ ಬಾರಿ ನಿರೀಕ್ಷೆ ಮೂಡಿಸಿತ್ತು. ಹಾಗಾಗಿ ಸಿನಿಮಾ ನೋಡಲು ಸಾಕಷ್ಟು ಮಂದಿ ತುದಿಗಾಲಲ್ಲಿ ನಿಂತಿದ್ದರು. ಆದರೆ ಕೊನೆ ಕ್ಷಣದಲ್ಲಿ ಸಿನಿಮಾ ಬಿಡುಗಡೆ ಮುಂದೂಡಲಾಗಿದ್ದು, ‘ಕ್ಷಮಿಸಿ, ಸಿನಿಮಾದ ರಿಲೀಸ್ ದಿನಾಂಕ ಮುಂದೂಡಲಾಗಿದೆ’ ಎಂದು ಚಿತ್ರತಂಡದವರು ಮಾಹಿತಿ ನೀಡಿದ್ದಾರೆ.
ನಿರ್ದೇಶಕ ನಾಗಶೇಖರ್ ಮತ್ತು ಟಾಲಿವುಡ್ ನಿರ್ಮಾಪಕ ರಾಮರಾವ್ ನಡುವಿನ ಜಟಾಪಟಿಯೇ ಇದಕ್ಕೆಲ್ಲ ಕಾರಣ ಎನ್ನಲಾಗಿದೆ. ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಬಿಡುಗಡೆಗೆ ಹೈದಾರಾಬಾದ್ ಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಕಾರಣದಿಂದ ಸಿನಿಮಾದ ರಿಲೀಸ್ ದಿನಾಂಕವನ್ನು ಮುಂದಕ್ಕೆ ಹಾಕುವುದು ಅನಿವಾರ್ಯ ಆಗಿದೆ.
ಕೊನೇ ಕ್ಷಣದಲ್ಲಿ ಬಿಡುಗಡೆ ಕ್ಯಾನ್ಸಲ್ ಆಗಿರುವುದರಿಂದ ಪ್ರೇಕ್ಷಕರಿಗೆ ಬೇಸರ ಆಗಿದೆ. 2011ರಲ್ಲಿ ‘ಸಂಜು ವೆಡ್ಸ್ ಗೀತಾ’ ಸಿನಿಮಾ ಬಂದಿತ್ತು. ಆದರೆ ಈಗ ರಿಲೀಸ್ಗೆ ಸಿದ್ಧವಾಗಿರುವ ‘ಸಂಜು ವೆಡ್ಸ್ ಗೀತಾ 2’ ಸಿನಿಮಾದ ಕಥೆಯೇ ಬೇರೆ. ಇದು ಸೀಕ್ವೆಲ್ ಅಲ್ಲ. ಈ ಬಾರಿ ನಿರ್ದೇಶಕ ನಾಗಶೇಖರ್ ಅವರು ಸಂಪೂರ್ಣ ಬೇರೆಯದ್ದೇ ಕಥೆ ಹೇಳಲು ಹೊರಟ್ಟಿದ್ದರು. ಆದರೆ ಸದ್ಯ ರಿಲೀಸ್ ಡೇಟ್ ಮುಂದೂಡಿಕೆ ಆಗಿದ್ದು, ಹೊಸ ರಿಲೀಸ್ ಡೇಟ್ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.