ಬೆಂಗಳೂರು:- ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ರದ್ದತಿ ಕುರಿತು ಆತಂಕ ಹೆಚ್ಚಾಗಿದೆ. ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಹಾಗೂ ಗೃಹಲಕ್ಷ್ಮಿ ಯೋಜನೆಗೆ ಒಂದಿಲ್ಲೊಂದು ಸಮಸ್ಯೆಗಳು ಬರುತ್ತಿದೆ. ಕಳೆದ ಎರೆಡು ತಿಂಗಳು ಹಿಂದೆ ಗೃಹಲಕ್ಷ್ಮಿ ಯೋಜನೆಯಲ್ಲಿ 16 ಸಾವಿರ ಜಿಎಸ್ಟಿ ಹಾಗೂ ಐಟಿ ಇದ್ದ ಕಾರ್ಡ್ಗಳನ್ನ ರದ್ದು ಮಾಡಿ ಗೃಹಿಣಿಯರಿಗೆ ಮಹಿಳಾ ಅಭಿವೃದ್ಧಿ ಇಲಾಖೆ ಶಾಕ್ ಕೊಟ್ಟಿತ್ತು. ಇದರ ಬೆನ್ನಲ್ಲೇ ಅನ್ನಭಾಗ್ಯ ಯೋಜನೆಯಲ್ಲಿ ಇದೀಗ ಅನರ್ಹ BPL ಕಾರ್ಡ್ ರದ್ದತಿಗೆ ಸಿಎಂ ಖಡಕ್ ಸೂಚನೆ ಕೊಟ್ಟಿದ್ದಾರೆ.
ಕೊನೇ ಕ್ಷಣದಲ್ಲಿ ‘ಸಂಜು ವೆಡ್ಸ್ ಗೀತಾ 2’ ಬಿಡುಗಡೆ ಕ್ಯಾನ್ಸಲ್: ಚಿತ್ರತಂಡದ ಕಿರಿಕ್ ನಿಂದ ನಿರಾಸೆಗೊಂಡ ಪ್ರೇಕ್ಷಕರು
ಎಸ್, ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ ಕೊಟ್ಟಿದ್ದಾರೆ.
ನಿನ್ನೆ ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿದ ಅವರು ಅಧಿಕಾರಿಗಳು ಹಲವು ಆದೇಶಗಳನ್ನು ನೀಡಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಅವರನ್ನು ಪಟ್ಟಿಯಿಂದ ಹಂತ ಹಂತವಾಗಿ ತೆಗೆದುಹಾಕಬೇಕು. ಆದರೆ, ಒಬ್ಬನೇ ಒಬ್ಬ ಅರ್ಹನ ಬಿಪಿಎಲ್ ಕಾರ್ಡ್ ರದ್ದು ಮಾಡಬಾರದು ಎಂದು ಸೂಚನೆ ಕೊಟ್ಟಿದ್ದಾರೆ.
ಅನರ್ಹ ಬಿಪಿಎಲ್ ಕಾರ್ಡುದಾರರು ಸ್ವಯಂ ಪ್ರೇರಿತವಾಗಿ ತಮ್ಮ ಕಾರ್ಡ್ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು. ಅದಾದ ನಂತರ ಅಂಥವರಿಗೆ ನೊಟೀಸ್ ನೀಡಿ ಬಿಪಿಎಲ್ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.