ಬೆಂಗಳೂರು:- ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದೆ ಬುಧವಾರ ಶರಣಾದ ನಕ್ಸಲರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ. ಪೊಲೀಸರು ಚಿಕ್ಕಮಗಳೂರು ಕೋರ್ಟ್ ಮುಂದೆ ನಕ್ಸಲರನ್ನು ಹಾಜರುಪಡಿಸಿದ್ದರು. ಸರ್ಕಾರದ ಪ್ಯಾಕೇಜ್ ಒಪ್ಪಿಯೇ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ ಮುಂದೆ 6 ನಕ್ಸಲರು ಶರಣಾಗಿದ್ದರು
ಬಿಪಿಎಲ್ ಫಲಾನುಭವಿಗಳಿಗೆ ಬಿಗ್ ಶಾಕ್: ಅನರ್ಹ ಕಾರ್ಡ್ ರದ್ಧತಿಗೆ ಸಿಎಂ ಖಡಕ್ ಆದೇಶ!
ರಾಜ್ಯದ ನಕ್ಸಲ್ ನಾಯಕರಾದ ಮುಂಡಗಾರು ಲತಾ, ಸುಂದರಿ ಕೊತ್ಲೂರು, ವನಜಾಕ್ಷಿ ಬಾಳೆಹೊಳೆ, ಜಿಶಾ, ವಸಂತ್ ಟಿ.ಎನ್, ಮಾರೆಪ್ಪ ಅರೋಲಿ ಅವರನ್ನು ಇಂದು ಚಿಕ್ಕಮಗಳೂರು ಡಿವೈಎಸ್ಪಿ ಬಾಲಾಜಿ ಸಿಂಗ್ ಎನ್ಐಎ ವಿಶೇಷ ಕೋರ್ಟ್ನ ನ್ಯಾಯಾಧೀಶರಾದ ಗಂಗಾಧರ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ಆ ಆರು ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಲಾಗಿದೆ. ಜನವರಿ 30ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಇನ್ನು ಶರಣಾಗತ ನಕ್ಸಲರನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತದೆ.
ನಿನ್ನೆಯಷ್ಟೇ ಮುಖ್ಯಮಂತ್ರಿಗಳ ಗೃಹ ಕಚೇರಿಯಲ್ಲಿ ಶರಣಾಗತರಾಗಿದ್ದ ಆರು ಮಂದಿ ನಕ್ಸಲೀಯರನ್ನು ಕಾನೂನು ಪ್ರಕ್ರಿಯೆ ಅನ್ವಯ ಗುರುವಾರ ಇಲ್ಲಿನ ಮಡಿವಾಳದ ತಾಂತ್ರಿಕ ಕೇಂದ್ರದಲ್ಲಿರಿಸಿ ಡಿ ಡಿವೈಎಸ್ಪಿ ಬಾಲಾಜಿ ಸಿಂಗ್ ನೇತೃತ್ವದ ತಂಡ ವಿಚಾರಣೆ ನಡೆಸಿತು. ಈ ವೇಳೆ ಚಿಕ್ಕಮಗಳೂರು ಪೊಲೀಸರ ಜೊತೆಗೆ ನಕ್ಸಲ್ ನಿಗ್ರಹ ಪಡೆ ಹಾಗೂ ರಾಜ್ಯ ಗುಪ್ತಚರ ಅಧಿಕಾರಿಗಳು ನಕ್ಸಲೀಯರಿಂದ ಪ್ರಾಥಮಿಕ ಮಾಹಿತಿ ಪಡೆದುಕೊಂಡರು.
ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ನಗರದ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದರು. ಹೆಚ್ಚಿನ ವಿಚಾರಣೆಗಾಗಿ ಕೋರ್ಟ್ ಜ.30ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಭೂಗತವಾಗಿರುವ ಎಲ್ಲ ಸದಸ್ಯರ ಹೆಸರುಗಳನ್ನ ಬಹಿರಂಗಪಡಿಸಬೇಕಿದೆ. ಶರಣಾದವರ ಸ್ವ ಇಚ್ಛಾ ಹೇಳಿಕೆಯನ್ನು ಇನ್ ಕ್ಯಾಮರಾ ವಿಧಾನದಲ್ಲಿ ದಾಖಲಿಸಬೇಕು. ಬಳಿಕ ಶರಣಾಗತಿ ವರದಿ ತಯಾರಿಸಿ, ಜಿಲ್ಲಾ ಶರಣಾಗತಿ ಸಮಿತಿಯ ಮುಂದಿಡಬೇಕು. ರಾಜ್ಯ ಶರಣಾಗತಿ ಸಮಿತಿಗೆ ಅನುಮೋದನೆಗಾಗಿ ಕಳುಹಿಸಿಕೊಡಬೇಕು. ಅನುಮತಿ ದೊರೆತ ಬಳಿಕ ಸರಕಾರ ಘೋಷಿಸಿರುವ ವಿಶೇಷ ಸೌಲಭ್ಯವನ್ನ ಜಿಲ್ಲಾ ಸಮಿತಿ ನೀಡಬೇಕೆಂದು ನ್ಯಾಯಾಲಯ ಉಲ್ಲೇಖಿಸಿದೆ ಎಂದು ವರದಿಯಾಗಿದೆ.
ಇನ್ನೂ ಇತಿಹಾಸದಲ್ಲೇ ಮೊದಲ ಬಾರಿಗೆ ನಿನ್ನೆ ಆರು ನಕ್ಸಲರು ಮುಖ್ಯಮಂತ್ರಿಗಳ ಮುಂದೆ ಶರಣಾಗುವ ಮೂಲಕ ಮುಖ್ಯಭೂಮಿಕೆಗೆ ಬಂದಿದ್ದಾರೆ. ಕರ್ನಾಟಕದಲ್ಲಿ ಉಳಿದಿರುವ ಏಕೈಕ ನಕ್ಸಲ್ ರವೀಂದ್ರನಿಗಾಗಿ ಹುಡುಕಾಟ ನಡೆಯುತ್ತಿದೆ. ಆತ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎನ್ನಲಾಗಿದೆ.