ಪೇಶಾವರ: ಸಕರಾರಿ ಕಾಮಗಾರಿಯಲ್ಲಿ ಕೆಲಸ ಮಾಡುತ್ತಿದ್ದ ಕನಿಷ್ಠ 16 ಮಂದಿ ಕಾರ್ಮಿಕರನ್ನು ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತೂನ್ಖ್ವಾ ಪ್ರಾಂತದಲ್ಲಿ ಶಸ್ತ್ರಧಾರಿಗಳ ಗುಂಪೊಂದು ಅಪಹರಿಸಿ ಅವರ ಬಿಡುಗಡೆಗೆ ಅಸ್ಪಷ್ಟ ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನಿರ್ಮಾಣ ಕಾಮಗಾರಿಯ ಸ್ಥಳಕ್ಕೆ ತೆರಳುತ್ತಿದ್ದ ಕಾರ್ಮಿಕರಿದ್ದ ವಾಹನವನ್ನು ಶಂಕಿತ ಉಗ್ರರು ಅಪಹರಿಸಿದ್ದಾರೆಂದು ಪ್ರದೇಶ ಪೊಲೀಸ್ ಅಧಿಕಾರಿ ಮೊಹಮ್ಮದ್ ಇಜಾಜ್ ಮಾಹಿತಿ ನೀಡಿದ್ದಾರೆ.
ಶಸ್ತ್ರಧಾರಿಗಳ ಬಳಿಕ ಖಬಲ್ ಖೇಲ್ ಪ್ರದೇಶದಲ್ಲಿ ಅಪಹರಣಕಾರರು ವಾಹನಕ್ಕೆ ಬೆಂಕಿ ಹಚ್ಚಿ ಎಸ್ಕೇಪ್ ಆಗಿದ್ದಾರೆ. ಇದುವರೆಗೂ ಈ ಅಪಹರಣ ಕೃತ್ಯದ ಹೊಣೆಯನ್ನು ಯಾವುದೇ ಗುಂಪು ವಹಿಸಿಕೊಂಡಿಲ್ಲ. ನಿಷೇಧಿತ ತೆಹ್ರಿಕಿ ತಾಲಿಬಾನ್ ಪಾಕಿಸ್ತಾನ (ಟಿಟಿಪಿ)ಯು ಗುಂಪು ಈ ಪ್ರದೇಶದಲ್ಲಿ ಸಕ್ರಿಯವಾಗಿದ್ದು, ಈ ಹಿಂದೆಯೂ ಹಲವಾರು ಅಪಹರಣಗಳನ್ನು ನಡೆಸಿರುವುದಾಗಿ ಆರೋಪಿಸಲಾಗಿತ್ತು.
ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಎಂಟು ಒತ್ತೆಯಾಳುಗಳನ್ನು ಬಿಡುಗಡೆ ಮಾಡಿ ಕರೆ ತಂದಿದ್ದು ಉಳಿದವರನ್ನು ಬಿಡುಗಡೆ ಮಾಡಲು ಪ್ರಯತ್ನಗಳು ನಡೆಯುತ್ತಿದ್ದಾರೆ. ಕಾರ್ಯಾಚರಣೆಯಲ್ಲಿ ಮೂವರು ಗಾಯಗೊಂಡಿದ್ದು, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.