ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ ಶೋಗೆ ಡೇಟ್ ಫಿಕ್ಸ್ ಆಗಿದೆ. 1996ರಲ್ಲಿ ಪ್ರಾರಂಭವಾದ ಏಷ್ಯಾದ ಅತಿದೊಡ್ಡ ಏರೋ ಶೋ ಕಾರ್ಯಕ್ರಮವಾದ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಸರಣಿಯು ಪ್ರತಿ ಎರಡು ವರ್ಷಕ್ಕೊಮ್ಮೆ ಬೆಂಗಳೂರಿನಲ್ಲಿ ನಡೆಯುತ್ತದೆ. ಈ ವೈಮಾನಿಕ ಪ್ರದರ್ಶನವನ್ನು ವೀಕ್ಷಿಸಲು ದೇಶ-ವಿದೇಶದ ನಾಯಕರು ಮತ್ತು ಜನರು ಆಗಮಿಸುತ್ತಾರೆ.
ಹೌದು ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ, 15ನೇ ಆವೃತ್ತಿಯ ಏರೋ ಇಂಡಿಯಾ-2025ಕ್ಕೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 10 ರಿಂದ 14ರ ವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ನಡೆಯಲಿದೆ.
‘ರನ್ವೇ ಟು ಎ ಬಿಲಿಯನ್ ಆಪರ್ಚುನಿಟೀಸ್’- ಬಿಲಿಯನ್ ಅವಕಾಶಗಳಿಗೆ ರನ್ ವೇ ಎಂಬ ವಿಶಾಲ ಧೇಯದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮ ವಿದೇಶಿ ಮತ್ತು ಭಾರತೀಯ ಸಂಸ್ಥೆಗಳ ನಡುವಿನ ಪಾಲುದಾರಿಕೆಯನ್ನು ರೂಪಿಸಲು ಮತ್ತು ಜಾಗತಿಕ ಮೌಲ್ಯ ಸರಣಿಯಲ್ಲಿ ದೇಶೀಕರಣ ಪ್ರಕ್ರಿಯೆಯನ್ನು ಮತ್ತಷ್ಟು ವೇಗಗೊಳಿಸಲು ಹೊಸ ಮಾರ್ಗಗಳ ಅನ್ವೇಷಣೆಗೆ ವೇದಿಕೆಯನ್ನು ಒದಗಿಸುತ್ತದೆ.
Fashion Tips: ನೈಲ್ ಪಾಲಿಶ್ ಹಚ್ಚಿದ ತಕ್ಷಣ ಒಣಗಬೇಕಾ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ
ಕಾರ್ಯಕ್ರಮದ ಮೊದಲ ಮೂರು ದಿನಗಳು (ಫೆಬ್ರವರಿ 10, 11 ಮತ್ತು 12) ವ್ಯವಹಾರದ ದಿನಗಳಾಗಿರುತ್ತವೆ. ಆದರೆ 13 ಮತ್ತು 14ರಂದು ಸಾರ್ವಜನಿಕ ವೀಕ್ಷಣೆಗೆ ಅವಕಾಶ ನೀಡಲಾಗಿದೆ. ಈ ಕಾರ್ಯಕ್ರಮ ಏರೋಸ್ಪೇಸ್ ವಲಯದಿಂದ ದೊಡ್ಡ ಶ್ರೇಣಿಯ ಮಿಲಿಟರಿ ವೇದಿಕೆಗಳ ವಾಯು ಪ್ರದರ್ಶನ ಮತ್ತು ಸ್ಥಿರ ಪ್ರದರ್ಶನಗಳನ್ನು ಒಳಗೊಂಡಿದೆ.
ಇದರಲ್ಲಿ ಪೂರ್ವಭಾವಿ ಕಾರ್ಯಕ್ರಮ (ಕರ್ಟನ್ ರೈಸರ್ ಈವೆಂಟ್), ಉದ್ಘಾಟನಾ ಕಾರ್ಯಕ್ರಮ, ರಕ್ಷಣಾ ಸಚಿವರ ಸಮಾವೇಶ, ಸಿಇಒಗಳ ದುಂಡು ಮೇಜಿನ ಸಭೆ, ಮಂಥನ್ ಸ್ಟಾರ್ಟ್-ಅಪ್ ಕಾರ್ಯಕ್ರಮ, ಉಸಿರು ಬಿಗಿಹಿಡಿದು ನೋಡುವ ಮೈನವಿರೇಳಿಸುವ ಏರ್ ಶೋಗಳಿವೆ, ಜತೆಗೆ ಇಂಡಿಯಾ ಪೆವಿಲಿಯನ್ ಅನ್ನು ಒಳಗೊಂಡಿರುವ ದೊಡ್ಡ ಪ್ರದರ್ಶನ ಪ್ರದೇಶ ಮತ್ತು ಏರೋಸ್ಪೇಸ್ ಕಂಪನಿಗಳ ವ್ಯಾಪಾರ ಮೇಳವನ್ನು ಒಳಗೊಂಡಿದೆ.
ಮಿತ್ರ ರಾಷ್ಟ್ರಗಳೊಂದಿಗೆ ಕಾರ್ಯತಂತ್ರದ ಸಹಭಾಗಿತ್ವದೆಡೆಗೆ ಮಾತುಕತೆಯನ್ನು ಸುಲಭಗೊಳಿಸಲು, ಭಾರತವು ‘ಬ್ರಿಡ್ಜ್-ಅಂತಾರಾಷ್ಟ್ರೀಯ ರಕ್ಷಣೆ ಮತ್ತು ಜಾಗತಿಕ ಪಾಲುದಾರಿಕೆ ಮೂಲಕ ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು’ ಎಂಬ ವಿಷಯದ ಮೇಲೆ ರಕ್ಷಣಾ ಸಚಿವರ ಸಮಾವೇಶವನ್ನು ಆಯೋಜಿಸುತ್ತದೆ. ಇದು ಭೌಗೋಳಿಕ ರಾಜಕೀಯ ಪರಿಸ್ಥಿತಿಗಳನ್ನು ಸಕ್ರಿಯಗೊಳಿಸಲಿದೆ ಮತ್ತು ಪರಸ್ಪರ ಸಮೃದ್ಧಿಯ ಹಾದಿಗೆ ಅನುವು ಮಾಡಿಕೊಡಲಿದೆ. ಅಲ್ಲದೆ, ಇದು ಭದ್ರತೆ ಮತ್ತು ಅಭಿವೃದ್ಧಿಯ ಹಂಚಿಕೆಯ ದೂರದೃಷ್ಟಿಗಳೊಂದಿಗೆ ರಾಷ್ಟ್ರಗಳ ನಡುವಿನ ಸಹಕಾರಕ್ಕೆ ಸೇತುವೆಯಾಗಿ ಕಾರ್ಯನಿರ್ವಹಿಸಲಿದೆ.
ಏರ್ ಶೋ ನೇಪಥ್ಯದಲ್ಲಿ ರಕ್ಷಣಾ ಸಚಿವರು, ರಕ್ಷಣಾ ಖಾತೆ ರಾಜ್ಯ ಸಚಿವರು, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಮತ್ತು ಕಾರ್ಯದರ್ಶಿಗಳ ಮಟ್ಟದಲ್ಲಿ ಹಲವಾರು ದ್ವಿಪಕ್ಷೀಯ ಸಭೆಗಳನ್ನು ಆಯೋಜಿಸಲಾಗಿದೆ. ಪಾಲುದಾರಿಕೆಯನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಹೊಸ ಮಾರ್ಗಗಳನ್ನು ಅನ್ವೇಷಿಸುವ ಮೂಲಕ ಸ್ನೇಹಪರ ದೇಶಗಳೊಂದಿಗೆ ರಕ್ಷಣಾ ಮತ್ತು ವೈಮಾನಿಕ ಸಂಬಂಧಗಳನ್ನು ಮತ್ತಷ್ಟು ಬಲಪಡಿಸುವತ್ತ ಗಮನಹರಿಸಲಾಗುವುದು.
ಸಿಇಒ ಗಳ ದುಂಡುಮೇಜಿನ ಸಭೆ, ವಿದೇಶಿ ಮೂಲ ಸಲಕರಣೆ ತಯಾರಕರಿಗೆ (ಒಇಎಂ ಗಳು) ಭಾರತದಲ್ಲಿ ಉತ್ಪಾದನೆಗೆ ಅನುಕೂಲಕರ ವೇದಿಕೆಯನ್ನು ಒದಗಿಸುವ ನಿರೀಕ್ಷೆಯಿದೆ. ಜಾಗತಿಕ ಸಿಇಒಗಳು, ದೇಶೀಯ ಪಿಎಸ್ಯುಗಳ ಸಿಎಂಡಿಗಳು ಮತ್ತು ಭಾರತದ ಪ್ರಧಾನ ಖಾಸಗಿ ರಕ್ಷಣಾ ಮತ್ತು ವೈಮಾನಿಕ ಉತ್ಪಾದನಾ ಕಂಪನಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿವೆ.
ಇಂಡಿಯಾ ಪೆವಿಲಿಯನ್ ತನ್ನ ಮೇಕ್-ಇನ್-ಇಂಡಿಯಾ ಉಪಕ್ರಮಕ್ಕೆ ಸ್ಥಳೀಯ ರಕ್ಷಣಾ ಉತ್ಪಾದನಾ ಸಾಮರ್ಥ್ಯಗಳ ವೃದ್ಧಿ ಮತ್ತು ಭವಿಷ್ಯದ ಸಂಭನೀಯಗಳು ಸೇರಿದಂತೆ ಜಾಗತಿಕ ಹಂತಕ್ಕೆ ಸಿದ್ಧವಾಗಿರುವ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಪ್ರದರ್ಶಿಸುವ ಮೂಲಕ ಭಾರತದ ಬದ್ಧತೆಯನ್ನು ಬಿಂಬಿಸುತ್ತದೆ. ಭಾರತೀಯ ನವೋದ್ಯಮಗಳ ಪ್ರಚಾರಕ್ಕಾಗಿ ಏರೋ ಇಂಡಿಯಾ 2025ರಲ್ಲಿ ಪೋಕಸ್ ಏರಿಯಾ (ಕೇಂದ್ರೀಕೃತ ಪ್ರದೇಶ)ವನ್ನು ಹೊಂದಿರಲಿದೆ ಮತ್ತು ನವೋದ್ಯಮಗಳನ್ನು ಅಭಿವೃದ್ಧಿಪಡಿಸಿರುವ ಅತ್ಯಾಧುನಿಕ ತಂತ್ರಜ್ಞಾನಗಳು/ಉತ್ಪನ್ನಗಳ ವ್ಯಾಪಕ ಶ್ರೇಣಿಯನ್ನು ವಿಶೇಷ ಐಡೆಕ್ಸ್ ಪೆವಿಲಿಯನ್ನಲ್ಲಿ ಪ್ರದರ್ಶಿಸಲಾಗುವುದು.