ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳೆಲ್ಲರೂ ಇಂದು ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್ಗೆ ಹಾಜರಾಗಿದ್ದಾರೆ. ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದು ದರ್ಶನ್ ಮಾತ್ರ ಕೊಂಚ ತಡವಾಗಿ ನ್ಯಾಯಾಲಯಕ್ಕೆ ಆಗಮಿಸಿದರು. ರೆಗ್ಯುಲರ್ ಬೇಲ್ ಸಿಕ್ಕ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಆಗಲು ದಿನಾಂಕ ನಿಗಧಿ ಮಾಡಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.
ಚಳಿಗಾಲದಲ್ಲಿ ಮೂಲಂಗಿ ಸೇವನೆ ಒಳ್ಳೆಯದು, ಆದ್ರೆ ತಪ್ಪಿಯೂ ಈ ಆಹಾರಗಳ ಜೊತೆ ತಿನ್ನಬೇಡಿ!
ದರ್ಶನ್, ನಟ ಧನ್ವೀರ್ ಹಾಗೂ ವಕೀಲರ ಜೊತೆ ಕಾರಿನಲ್ಲಿ ನ್ಯಾಯಾಲಯಕ್ಕೆ ಆಗಮಿಸಿದರು. ದರ್ಶನ್, ನ್ಯಾಯಾಲಯದ ಬಳಿ ಬಂದಾಗ ಜನ ಮತ್ತು ಮಾಧ್ಯಮಗಳು ಸುತ್ತುವರೆದರು. ಒಂದೇ ನ್ಯಾಯಾಲಯದ ಹಾಲ್ನಲ್ಲಿ ಎಲ್ಲ ಆರೋಪಿಗಳು ನ್ಯಾಯಾಧೀಶರ ಮುಂದೆ ನಿಂತು ಹಾಜರಿ ನೀಡಲಿದ್ದಾರೆ.
ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾದ ಬಳಿಕ ಹಾಜರಿ ಪಡೆದುಕೊಂಡ ನ್ಯಾಯಾಧೀಶರು ಪ್ರಕರಣದ ವಿಚಾರಣೆಯನ್ನು ಫೆಬ್ರವರಿ 25ಕ್ಕೆ ಮುಂದೂಡಿ ಆದೇಶಿಸಿದರು. ಫೆಬ್ರವರಿ 25ಕ್ಕೆ ಮತ್ತೆ ಎಲ್ಲ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗಿ ಹಾಜರಿ ಹಾಕಬೇಕಿದೆ.