ಭಾರತ ಮತ್ತು ಇಂಗ್ಲೆಂಡ್ ನಡುವೆ 3 ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಫೆಬ್ರವರಿ 6 ರಿಂದ ಆರಂಭವಾಗಲಿದೆ. ಚಾಂಪಿಯನ್ಸ್ ಟ್ರೋಫಿಗೂ ಮುನ್ನ ತಯಾರಿಗೆ ಇದು ಕೊನೆಯ ಅವಕಾಶವಾಗಿದ್ದು, ಈ ಸರಣಿಯಲ್ಲಿನ ಪ್ರದರ್ಶನದ ಆಧಾರದ ಮೇಲೆ ಮಾತ್ರ ತಂಡವನ್ನು ಆಯ್ಕೆ ಮಾಡಲಾಗುತ್ತದೆ. ಆದರೆ ಇದೀಗ ಕನ್ನಡಿಗನ ಅಭಿಮಾನಿಗಳಿಗೆ ಶಾಕ್ ಕಾದಿದೆ
ಹೌದು ಸ್ಟಾರ್ ವಿಕೆಟ್ಕೀಪರ್ ಬ್ಯಾಟರ್ ಕೆ.ಎಲ್. ರಾಹುಲ್ಗೆ ಇಂಗ್ಲೆಂಡ್ ವಿರುದ್ಧದ ಟಿ20 ಮತ್ತು ಏಕದಿನ ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ವರದಿಯಾಗಿದೆ. ಇಂಗ್ಲೆಂಡ್ ವಿರುದ್ಧದ ಟಿ20 ಹಾಗೂ ಏಕದಿನ ಸರಣಿಯಿಂದ ರಾಹುಲ್ಗೆ ವಿಶ್ರಾಂತಿ ನೀಡಲು ನಿರ್ಧರಿಸಲಾಗಿದೆ.
Fashion Tips: ನೈಲ್ ಪಾಲಿಶ್ ಹಚ್ಚಿದ ತಕ್ಷಣ ಒಣಗಬೇಕಾ..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ
ಆದರೆ, ಇದರ ಹೊರತಾಗಿಯೂ ಚಾಂಪಿಯನ್ಸ್ ಟ್ರೋಫಿಗೆ ಆಯ್ಕೆಯಾಗಿರುವ ತಂಡದಲ್ಲಿ ರಾಹುಲ್ಗೆ ಸ್ಥಾನ ಸಿಗಲಿದೆ ಎಂದು ಆಯ್ಕೆ ಸಮಿತಿ ಭರವಸೆ ನೀಡಿದೆ. ಇದರರ್ಥ ರಾಹುಲ್ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿ ಮತ್ತು ಏಕದಿನ ಸರಣಿಯನ್ನು ಆಡದೆ ಚಾಂಪಿಯನ್ಸ್ ಟ್ರೋಫಿಗೆ ಕಾಲಿಡಲಿದ್ದಾರೆ.
ಆಯ್ಕೆ ಸಮಿತಿಯ ಈ ನಿರ್ಧಾರ ಆಘಾತಕಾರಿಯಾಗಿದೆ. ಏಕೆಂದರೆ ರಾಹುಲ್ ದೀರ್ಘಕಾಲ ಟಿ20 ತಂಡದ ಭಾಗವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಟಿ20 ಸರಣಿಗೆ ಅವರು ಆಯ್ಕೆಯಾಗುವ ನಿರೀಕ್ಷೆ ಇರಲಿಲ್ಲ. ಆದರೆ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ನಡೆಯುವ ಏಕದಿನ ಸರಣಿಯಿಂದ ರಾಹುಲ್ಗೆ ವಿಶ್ರಾಂತಿ ನೀಡುವ ನಿರ್ಧಾರ ಖಂಡಿತವಾಗಿಯೂ ಅಚ್ಚರಿ ಮೂಡಿಸಿದೆ.