ಬೆಂಗಳೂರು: ಚುನಾವಣಾ ಸಮಯದಲ್ಲಿ ನಮಗೆ ಬೇಕಾದ ಜನ ದುಡ್ಡು ಕೊಡುತ್ತಾರೆ, ಅದನ್ನು ಖರ್ಚು ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಚುನಾವಣೆಯ ಸಂದರ್ಭದಲ್ಲಿ ತಮಗೆ ಬೇಕಿರುವ ಜನ ಬಂದು ಚುನಾವಣಾ ಖರ್ಚಿಗೆ ದುಡ್ಡು ನೀಡುತ್ತಾರೆ,
ಹಾಗೆ ಕೊಟ್ಟವರ ದುಡ್ಡನ್ನು ಚುನಾವಣೆಯಲ್ಲಿ ಖರ್ಚು ಮಾಡಿದ್ದೇನೆ, ತಾನು ಸತ್ಯ ಹರಿಶ್ಚಂದ್ರ ಅಂತ ಯಾವತ್ತೂ ಹೇಳಿಕೊಂಡಿಲ್ಲ, ಹಾಗಂತ ಈ ಸರ್ಕಾರದ ಹಾಗೆ ತನ್ನ ಸಹಿಯನ್ನು ಮಾರಾಟಕ್ಕಿಟ್ಟಿಲ್ಲ, ಈ ಸರ್ಕಾರ ಎಲ್ಲಾದಕ್ಕೂ ದರ ನಿಗದಿ ಮಾಡಿದೆ ಎಂದು ಕುಮಾರಸ್ವಾಮಿ ಹೇಳಿದರು. ನಾನು ಅಧಿಕಾರ ನಡೆಸಿದ್ದೇನೆ. ನಾನು ಹರಿಶ್ಚಂದ್ರ ಎಂದು ಎಲ್ಲೂ ಹೇಳಿಲ್ಲ. ವಿಧಾನಸಭೆಯಲ್ಲಿ ಹೇಳಿದ್ದೇನೆ.
Sour Curd: ಹುಳಿ ಬಂದ ಮೊಸರಿನ ಸೇವನೆ ಆರೋಗ್ಯಕ್ಕೆ ಒಳ್ಳೆಯದೋ ಕೆಟ್ಟದ್ದೋ.? ಇಲ್ಲಿದೆ ಮಾಹಿತಿ
ಚುನಾವಣೆ ನಡೆಯಬೇಕಾದ್ರೆ ಇನ್ನೊಬ್ಬರ ಹತ್ರ ಕೈ ಚಾಚಲೇಬೇಕು. ಆದರೆ ನಾನು ಅಧಿಕಾರ ನಡೆಸುವಾಗ ಪ್ರತಿಯೊಂದು ಮಾರಾಟಕ್ಕೆ ಇಟ್ಟಿರಲಿಲ್ಲ. ಈ ಸರ್ಕಾರ ಪ್ರತಿಯೊಂದನ್ನು ಮಾರಾಟಕ್ಕೆ ಇಟ್ಟಿದೆ. ಪ್ರತಿಯೊಂದಕ್ಕೂ ಲೂಟಿ ಹೊಡೆದುಕೊಂಡು ಕೂತಿದ್ದಾರೆ. ಈ ಸರ್ಕಾರದಲ್ಲಿ ರೇಟ್ ಕಾರ್ಡ್ ಮೊದಲೇ ಫಿಕ್ಸ್ ಆಗಿ ಹೋಗಿದೆ. ನಾನು ಪ್ರಾರಂಭದಲ್ಲೇ ಈ ಸರ್ಕಾರದ ರೇಟ್ ಕಾರ್ಡ್ ಬಗ್ಗೆ ಹೇಳಿದ್ದೆ ಎಂದಿದ್ದಾರೆ.