ಬೀದರ್:- ಗುತ್ತಿಗೆದಾರ ಸಚಿನ್ ಸೂಸೈಡ್ ಕೇಸ್ ಗೆ ಸಂಬಂಧಿಸಿದಂತೆ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರು ಅರೆಸ್ಟ್ ಮಾಡಲಾಗಿದೆ
ರಾಜು ಕಪನೂರು, ಘೊರಕ್ ನಾಥ್, ನಂದಕುಮಾರ್ ನಾಗಬುಜಂಗಿ, ರಾಮನಗೌಡಾ ಪಾಟೀಲ್, ಸತೀಶ್ ಎನ್ನುವರನ್ನು ಬಂಧಿಸಲಾಗಿದೆ.
ಆತ್ಮಹತ್ಯೆಗೂ ಮುನ್ನ ಡೆತ್ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್ , ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರು ಸೇರಿದಂತೆ ಒಟ್ಟು 8 ಜನರ ಹೆಸರನ್ನು ಉಲ್ಲೇಖಿಸಿದ್ದರು ಎನ್ನಲಾಗಿದೆ.
ಪ್ರಕರಣ ಸಂಬಂಧ ತನಿಖೆಗಾಗಿ ಬೀದರ್ ಬಂದಿರುವ ಸಿಐಡಿ ಅಧಿಕಾರಿಗಳು, ಡೆತ್ನೋಟ್ನಲ್ಲಿ ಉಲ್ಲೇಖವಾಗಿದ್ದ ಹೆಸರಿನವರಿಗೆ ವಿಚಾರಣೆಗೆ ಬರುವಂತೆ ನೋಟಿಸ್ ನೀಡಿತ್ತು. ಅದರಂತೆ ಐವರು ಇಂದು ಬೀದರ್ ರೈಲ್ವೆ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಆದ್ರೆ, ವಿಚಾರಣೆಯಲ್ಲಿ ಸೂಕ್ತವಾದ ಉತ್ತರ ಬಾರದ ಹಿನ್ನೆಲೆಯಲ್ಲಿ ಸಿಐಡಿ, ಆರೋಪಿಗಳನ್ನು ಬಂಧಿಸಿದೆ.
ಬಂಧಿತರನ್ನು ಬೀದರ್ ಜೆಎಂಎಫ್ಸಿ ಕೋರ್ಟ್ ಜಡ್ಜ್ ಮುಂದೆ ಹಾಜರುಪಡಿಸಲು ಸಿದ್ಧತೆ ನಡೆಸಿದ್ದಾರೆ.