ಟೀಮ್ ಇಂಡಿಯಾಗೆ ಮತ್ತೊಂದು ಶಾಕ್ ಎದುರಾಗಿದ್ದು,R ಅಶ್ವಿನ್ ಬೆನ್ನಲ್ಲೇ ಸ್ಟಾರ್ ಕ್ರಿಕೆಟರ್ ನಿವೃತ್ತಿ ಘೋಷಿಸಿದ್ದಾರೆ.
ನಟಿ ರಶ್ಮಿಕಾ ಮಂದಣ್ಣಗೆ ಪೆಟ್ಟು: ಆತಂಕಗೊಂಡ ಫ್ಯಾನ್ಸ್; ಅಂತದ್ದೇನಾಯ್ತು?
ಇತ್ತೀಚೆಗಷ್ಟೇ ಆರ್. ಅಶ್ವಿನ್ ನಿವೃತ್ತಿ ಘೋಷಿಸಿದ್ದರು. ಈಗ ಟೀಮ್ ಇಂಡಿಯಾದಲ್ಲಿ ಸ್ಥಾನ ಸಿಗದ ಕಾರಣ ಮತ್ತೊಬ್ಬ ಬೌಲರ್ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆದಿದ್ದಾರೆ.
ಟೀಮ್ ಇಂಡಿಯಾದ ರೈಟ್ ಆರ್ಮ್ ಬೌಲರ್ ವರುಣ್ ಆರನ್. ಇವರು ತಮ್ಮ ಫಾಸ್ಟ್ ಬೌಲಿಂಗ್ನಿಂದಲೇ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಂಡವರು. 35 ವರ್ಷದ ಆರನ್ 2011ರಲ್ಲಿ ಎಂಎಸ್ ಧೋನಿ ನಾಯಕತ್ವದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಡೆಬ್ಯೂ ಮಾಡಿದ್ರು. ಕ್ರಿಕೆಟ್ ಲೋಕದಲ್ಲಿ ಸಂಚಲನ ಮೂಡಿಸಿದ್ದ ಇವರು ಆಗಾಗ ಗಾಯಕ್ಕೆ ಒಳಗಾಗಿ ತಂಡದಿಂದ ಹೊರಗುಳಿದಿದ್ರು. ಕೊನೆಗೂ ಅವಕಾಶ ಸಿಗದ ಕಾರಣ ಈ ನಿರ್ಧಾರಕ್ಕೆ ಬಂದಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಬಗ್ಗೆ ವರುಣ್ ಆರನ್ ತಮ್ಮ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಹಾಕಿದ್ದಾರೆ. ಕಳೆದ 20 ವರ್ಷಗಳಿಂದ ನಾನು ಕ್ರಿಕೆಟರ್ ಆಗಿದ್ದೇನೆ. ನನ್ನ ವೇಗದ ಬೌಲಿಂಗ್ನಲ್ಲಿ ಸೋಲು ಗೆಲುವು ಕಂಡಿದ್ದೇನೆ. ಬದುಕಿದ್ದೇನೆ, ಉಸಿರಾಡಿದ್ದೇನೆ ಮತ್ತು ಯಶಸ್ಸು ಸಾಧಿಸಿದ್ದೇನೆ. ನನಗೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು. ನಾನು ಅಧಿಕೃತವಾಗಿ ಇಂದು ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.