ಮೈಸೂರು:- ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 50-50 ನಿವೇಶ ಹಂಚಿಕೆ ಹಗರಣ ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಸೃಷ್ಟಿಸಿದೆ.
SSLC-PUC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷಾ ವೇಳಾಪಟ್ಟಿ ಪ್ರಕಟ; ದಿನಾಂಕ, ಸಬ್ಜೆಕ್ಟ್, ಸಮಯದ ಡೀಟೈಲ್ಸ್ ಇಲ್ಲಿದೆ!
ಜೆಡಿಎಸ್ ಶಾಸಕನಿಗೆ “ಮುಡಾ” ಸಂಕಷ್ಟ ಜೋರಾಗಿದ್ದು, ಶಾಸಕ ಜಿಟಿ ದೇವೇಗೌಡ ವಿರುದ್ಧ ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು ಕೊಟ್ಟಿದ್ದಾರೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮತ್ತೊಂದು ಅಕ್ರಮ ಬಯಲಾಗಿದೆ. ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ವಿರುದ್ಧ ಆರ್ಟಿಐ ಕಾರ್ಯಕರ್ತರ ಸ್ನೇಹಮಯಿ ಕೃಷ್ಣ ಮೈಸೂರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ. ಇದರಿಂದ ಶಾಸಕ ಜಿಟಿ ದೇವೇಗೌಡಗೆ ಸಂಕಷ್ಟು ಶುರುವಾಗಿದೆ.
ಶಾಸಕ ಜಿ.ಟಿ.ದೇವೇಗೌಡ ತಮ್ಮ ಪ್ರಭಾವವನ್ನು ಬಳಸಿಕೊಂಡು, ಸರ್ಕಾರಕ್ಕೆ ಸೇರಿದ ಮತ್ತು ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ದಾಖಲೆಗಳನ್ನು ಸೃಷ್ಟಿ ಮಾಡಿಸಿದ್ದಾರೆ. ಬಳಿಕ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಕೆ.ಚೌಡಯ್ಯ ಎಂಬುವವರ ಹೆಸರಿಗೆ 50:50 ಅನುಪಾತದಲ್ಲಿ ಒಟ್ಟು ಆರು ನಿವೇಶನಗಳನ್ನು ಅಕ್ರಮವಾಗಿ ಕೊಡಿಸಿದ್ದಾರೆ. ಇದರಲ್ಲಿ, 50X80 ಅಡಿ ಅಳತೆಯ ಎರಡು ನಿವೇಶನಗಳನ್ನು, ಅವರ ಮಗಳು ಡಿ.ಅನ್ನಪೂರ್ಣ ಮತ್ತು ಅಳಿಯ ಜಿ.ಎಂ.ವಿಶ್ವೇಶ್ವರಯ್ಯನವರ ಹೆಸರಿಗೆ ಮಾಡಿಸಿದ್ದಾರೆ ಎಂದು ಸ್ನೇಹಮಯಿ ಕೃಷ್ಣ ದೂರು ನೀಡಿದ್ದಾರೆ.
ಮೈಸೂರು ತಾಲ್ಲೂಕು ಕಸಬಾ ಹೋಬಳಿ ದೇವನೂರು ಗ್ರಾಮದ ಸರ್ವೆ ನಂ.154ರ ಆರ್.ಟಿ.ಸಿ ಪ್ರತಿಯಲ್ಲಿನ 9ನೇ ಕಾಲಂನಲ್ಲಿ ಜವರಯ್ಯ, ಕೆ.ಬೋರಯ್ಯ, ಚೌಡಯ್ಯ, ಪುಟ್ಟಣ್ಣಯ್ಯ, ಗಂಗಾಧರ ಎಂಬುವವರ ಹೆಸರಿಗೆ 3.38 ಎಕರೆ ಜಮೀನಿನ ಜಂಟಿ ಖಾತೆ ಇದೆ. ಇದೇ, ಆರ್ಟಿಸಿಯಲ್ಲಿ 11ನೇ ಕಾಲಂನಲ್ಲಿ ನಗರದ ಭೂಮಿತಿ ಕಾಯಿದೆ ವ್ಯಾಪ್ತಿಗೆ ಒಳ ಪಟ್ಟಿರುವುದಾಗಿ ನಮೂದಿಸಿದೆ. ಅಂದರೆ ಸರ್ಕಾರದ ಆಸ್ತಿಯಾಗಿದೆ.
ಜಮೀನು ನಗರದ ಭೂಮಿತಿ ಕಾಯಿದೆ ವ್ಯಾಪ್ತಿಗೆ ಒಳಪಟ್ಟಿರುವುದರಿಂದ ಸರ್ಕಾರ ವಶಕ್ಕೆ ಪಡೆದಿದೆಯೇ? ಅಥವಾ ಕಾಯಿದೆಯಿಂದ ಕೈಬಿಡಲಾಗಿದೆಯೆ? ಕೈಬಿಟ್ಟಿದ್ದರೆ ಆರ್ಟಿಸಿಯಲ್ಲಿ ಈಗಲೂ ಉಲ್ಲೇಖ ಇರಲು ಕಾರಣವೇನು? ಪ್ರಾಧಿಕಾರದಿಂದ ಜಮೀನನ್ನು ಸ್ವಾಧೀನಕ್ಕೆ ಪಡೆಯಲಾಗಿದೆಯೇ? ಯಾವಾಗ ಸ್ವಾಧೀನಕ್ಕೆ ಪಡೆಯಲಾಗಿದೆ? ಆ ಸಂದರ್ಭದಲ್ಲಿ ಯಾರಿಗೆ ಪರಿಹಾರದ ಹಣವನ್ನು ನೀಡಲಾಗಿದೆ? ಅಥವಾ ಪರಿಹಾರ ನೀಡಿಲ್ಲವೇ? ಜಮೀನಿನಲ್ಲಿ ಪ್ರಾಧಿಕಾರದಿಂದ ಬಡಾವಣೆ ರಚನೆ ಮಾಡಲಾಗಿದೆಯೇ? ಯಾವಾಗ ಬಡಾವಣೆ ರಚನೆ ಮಾಡಲಾಗಿದೆ? ಎಂಬ ಅಂಶಗಳ ಬಗ್ಗೆ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.