ಬೆಂಗಳೂರು:- ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಸಿಲ್ಕ್ ಬೋರ್ಡ್ವರೆಗೆ ಸುರಂಗ ಮಾರ್ಗ ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಪಟ್ಟು ಹಿಡಿದಿದ್ದಾರೆ.
ನಕ್ಸಲರು ಶರಣಾದ್ರೂ ಶಸ್ತ್ರಾಸ್ತ್ರಗಳು ಕಾಡಿನಲ್ಲೇ ಅಡಗಿದೆ: CM ಸಿದ್ದರಾಮಯ್ಯ ಹೇಳಿದ್ದೇನು?
ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ 18 ಕಿಮೀ ಟನಲ್ ರಸ್ತೆಗೆ ಬಿಬಿಎಂಪಿ ಮುಂದಾಗಿದೆ. ಆದರೆ ಈ ಬೆಂಗಳೂರಿನ ಟನಲ್ ರಸ್ತೆ ಪ್ರಾಜೆಕ್ಟ್ ಬಗ್ಗೆ ಅಪಸ್ವರ ಕೇಳಿಬಂದಿದೆ.
ಹೌದು, ಸಿಲಿಕಾನ್ ಸಿಟಿ ಬೆಂಗಳೂರಿನ ಟ್ರಾಫಿಕ್ ಜಾಮ್ಗೆ ಪರಿಹಾರ ಎಂದು ಹೆಬ್ಬಾಳದ ಎಸ್ಟೀಮ್ ಮಾಲ್ನಿಂದ ಸಿಲ್ಕ್ ಬೋರ್ಡ್ವರೆಗೆ ಸುರಂಗ ಮಾರ್ಗ ನಿರ್ಮಾಣಕ್ಕೆ ಡಿಸಿಎಂ ಡಿಕೆಶಿ ಪಟ್ಟು ಹಿಡಿದಿದ್ದಾರೆ.
ಡಿಪಿಆರ್ ಕೂಡ ಸಿದ್ಧವಾಗಿದೆ. ಆದರೆ ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಸಂಸದ ಪಿಸಿ ಮೋಹನ್ ಬಿಬಿಎಂಪಿ ಕಮೀಷನರ್ಗೆ ಪತ್ರ ಬರೆದು ಯೋಜನೆಯಿಂದಾಗುವ ತೊಂದರೆ ಬಗ್ಗೆ ವಿವರಿಸಿದ್ದಾರೆ.
ಇದೊಂದು ಅವೈಜ್ಞಾನಿಕ ನಿರ್ಧಾರ. ಟನಲ್ ಬೇಡ, ಮೆಟ್ರೋ ಬೇಕು ಎಂದು ಹೇಳಿದ್ದಾರೆ. ಡಿಪಿಆರ್ನಲ್ಲಿ ಸಾಕಷ್ಟು ಲೋಪದೋಷ ಹೊಂದಿರುವ ಈ ಪ್ರಾಜೆಕ್ಟ್ ಬೆಂಗಳೂರಿಗೆ ಟ್ರಾಫಿಕ್ ಜಾಮ್ ಸಮಸ್ಯೆ ಬಗೆಹರಿಸಲ್ಲ ಎಂಬುದು ಸಂಸದರ ವಾದ. ಅಲ್ಲದೇ ಸಾವಿರಾರು ಕೋಟಿ ವ್ಯಯಿಸುವ ಬದಲು ಮೆಟ್ರೋ, ಬಿಎಂಟಿಸಿಯಂತಹ ಸಾರ್ವಜನಿಕ ಸಾರಿಗೆಗೆ ಆದ್ಯತೆ ನೀಡಬೇಕು ಎಂದು ಮನವಿ ಮಾಡಿದ್ದಾರೆ.