ಬೆಂಗಳೂರು: ಬ್ಯಾಂಕ್ ನಲ್ಲಿ ಉದ್ಯೋಗ ಮಾಡಲು ಆಸಕ್ತಿಯಿದ್ದು, ಉದ್ಯೋಗದ ಹುಡುಕಾಟದಲ್ಲಿ ದ್ದೀರಾ.? ಹಾಗಿದ್ರೆ ನಿಮಗಿಲ್ಲಿದೆ ಭರ್ಜರಿ ಉದೋಗವಕಾಶ.. ಹೌದು ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನ ಶಾಖೆಯಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿದೆ
. ಈ ಬ್ಯಾಂಕ್ ನಲ್ಲಿ ಒಟ್ಟು 32 ಕಿರಿಯ ಸಹಾಯಕ ಹುದ್ದೆಗಳು ಖಾಲಿಯಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ ಗೆ ಭೇಟಿ ನೋಡಿ ಜನವರಿ 16, 2025 ರೊಳಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರಗಳು
* ಸಂಸ್ಥೆಯ ಹೆಸರು : ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್
* ಹುದ್ದೆ : ಜೂನಿಯರ್ ಅಸಿಸ್ಟೆಂಟ್
* ಉದ್ಯೋಗ ಸ್ಥಳ : ಕೊಡಗು
* ವೇತನ : ಮಾಸಿಕ ರೂ. 30,350 – ರೂ 58,250
ಶೈಕ್ಷಣಿಕ ಅರ್ಹತೆ
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇ 55% ಕನಿಷ್ಠ ಅಂಕದೊಂದಿಗೆ ವಾಣಿಜ್ಯೇತರ ಪದವಿ ಅಥವಾ ಶೇ 50 ಕನಿಷ್ಠ ಅಂಕದೊಂದಿಗೆ ವಾಣಿಜ್ಯ ಪದವಿ, ಡಿಪ್ಲೊಮೋ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
* ಕನಿಷ್ಠ 6 ತಿಂಗಳ ಡಿಪ್ಲೊಮೋ ಇನ್ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ಸರ್ಟಿಫಿಕೇಟ್ ಕೋರ್ಸ್ ಕಡ್ಡಾಯವಾಗಿ ಮಾಡಿರಬೇಕು.
ವಯೋಮಿತಿ ಹಾಗೂ ಆಯ್ಕೆ ವಿಧಾನ
* ಕಿರಿಯ ಸಹಾಯಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು.
* ಸಾಮಾನ್ಯ ವರ್ಗದ ಅಭ್ಯರ್ಥಿಗಳ ಗರಿಷ್ಠ ವಯಸ್ಸು 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷ ಹಾಗೂ ಪ.ಜಾತಿ/ಪ.ಪಂಗಡ/ ಪ್ರ1ರ ಅಭ್ಯರ್ಥಿಗಳ ವಯಸ್ಸು ಗರಿಷ್ಠ 40 ವರ್ಷ ದಾಟಿರಬಾರದು.
* ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಶುಲ್ಕ
* ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ಅಭ್ಯರ್ಥಿಗಳು ರೂ. 1750 ಶುಲ್ಕವನ್ನು ಪಾವತಿಸಬೇಕು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ 1, ಮಹಿಳೆಯರು, ಅಂಗವಿಕಲ ಅಭ್ಯರ್ಥಿಗಳಿಗೆ ರೂ. 1250 ಶುಲ್ಕವಿರುತ್ತದೆ
ಅರ್ಜಿ ಸಲ್ಲಿಸುವುದು ಹೇಗೆ?
* ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಮೊದಲು ಬ್ಯಾಂಕ್ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಅಗತ್ಯವಿರುವ ದಾಖಲೆಗಳು ಇದೆಯೇ ಎಂದು ಪರಿಶೀಲಿಸಿಕೊಳ್ಳಿ.
* ಆ ಬಳಿಕ ಬ್ಯಾಂಕಿನ ಅಧಿಕೃತ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ, ಆ ವೇಳೆ ಅಪ್ಲಿಕೇಷನ್ ತೆರೆದುಕೊಳ್ಳುತ್ತದೆ.
* ಈ ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು ಸರಿಯಾಗಿ ಭರ್ತಿ ಮಾಡಿ, ಒಮ್ಮೆ ಪರಿಶೀಲಿಸಿ.
* ತದನಂತರದಲ್ಲಿ ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ.
* ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಆನ್ಲೈನ್ ನಲ್ಲಿ ಶುಲ್ಕ ಪಾವತಿಸಿದರೆ ಅರ್ಜಿ ಸಲ್ಲಿಕೆಯೂ ಪೂರ್ಣಗೊಳ್ಳುತ್ತದೆ.
ಪ್ರಮುಖ ದಿನಾಂಕಗಳು
* ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಡಿಸೆಂಬರ್ 20, 2024
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಜನವರಿ 16, 2025