ಭಾರತೀಯ ವಾಯುಪಡೆ ಯಲ್ಲಿ ಅಗ್ನಿವೀರ್ವಾಯು ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಹಾಕಬಹುದು. ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಕೆಲಸ ಮಾಡಲು ಇಚ್ಛಿಸುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು. ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ afcat.cdac.in ಗೆ ಭೇಟಿ ನೀಡಿ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು. ಫ್ಲೈಯಿಂಗ್ ಬ್ರಾಂಚ್ , ಗ್ರೌಂಡ್ ಡ್ಯೂಟಿ ಟೆಕ್ನಿಕಲ್ / ನಾನ್ ಟೆಕ್ನಿಕಲ್ ಹುದ್ದೆಗಳು ಸೇರಿದಂತೆ ಒಟ್ಟು 336 ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ
* ಸಂಸ್ಥೆಯ ಹೆಸರು : ಭಾರತೀಯ ವಾಯುಪಡೆ
* ಹುದ್ದೆಯ ಹೆಸರು : ಫ್ಲೈಯಿಂಗ್ ಬ್ರಾಂಚ್, ಗ್ರೌಂಡ್ ಡ್ಯೂಟಿ (ತಾಂತ್ರಿಕ), ಗ್ರೌಂಡ್ ಡ್ಯೂಟಿ (ತಾಂತ್ರಿಕೇತರ)
* ಒಟ್ಟು ಹುದ್ದೆಗಳ ಸಂಖ್ಯೆ : 336 ಹುದ್ದೆಗಳು
ಶೈಕ್ಷಣಿಕ ಅರ್ಹತೆ
* ಫ್ಲೈಯಿಂಗ್ ಬ್ರಾಂಚ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಅಧ್ಯಯನ ಮಾಡಿದ್ದು, ಕನಿಷ್ಠ 50% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಇದರೊಂದಿಗೆ ಕನಿಷ್ಠ 60% ಅಂಕಗಳೊಂದಿಗೆ ಬ್ಯಾಚುಲರ್ ಪದವಿ ಅಥವಾ ಬಿಇ/ಬಿ ಟೆಕ್ ಪದವಿಯನ್ನು ಪಡೆದಿರಬೇಕು.
* ಗ್ರೌಂಡ್ ಡ್ಯೂಟಿ (ತಾಂತ್ರಿಕ ಹಾಗೂ ತಾಂತ್ರಿಕೇತರ ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪಿಯುಸಿಯಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯವನ್ನು ಅಧ್ಯಯನ ಮಾಡಿದ್ದು, ಕನಿಷ್ಠ 60% ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಅಲ್ಲದೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ/ಬಿಟೆಕ್ ಪೂರ್ಣಗೊಳಿಸಿರಬೇಕು.
ವಯಸ್ಸಿನ ಮಿತಿ
* ಫ್ಲೈಯಿಂಗ್ ಶಾಖೆ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ರಿಂದ ಗರಿಷ್ಠ ವಯಸ್ಸು 24 ವರ್ಷ ದಾಟಿರಬಾರದು. ಡಿಜಿಸಿಎ (ಭಾರತ) ನೀಡಿದ ಮಾನ್ಯ ಮತ್ತು ಪ್ರಸ್ತುತ ವಾಣಿಜ್ಯ ಪೈಲಟ್ ಪರವಾನಗಿ ಹೊಂದಿರುವ ಅಭ್ಯರ್ಥಿಗಳಿಗೆ 2 ವರ್ಷಗಳವರೆಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
* ಗ್ರೌಂಡ್ ಡ್ಯೂಟಿ (ತಾಂತ್ರಿಕ ಮತ್ತು ತಾಂತ್ರಿಕೇತರ) ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸಿನ ಮಿತಿ 20 ವರ್ಷ ಹಾಗೂ ಗರಿಷ್ಠ ವಯಸ್ಸು 26 ವರ್ಷ ದಾಟಿರಬಾರದು.
ಅರ್ಜಿ ಶುಲ್ಕ
* ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 550 ರೂಪಾಯಿ ಅರ್ಜಿ ಶುಲ್ಕವಿರುತ್ತದೆ. ಆದರೆ ಎನ್ ಸಿ ಸಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.
ಆಯ್ಕೆ ಪ್ರಕ್ರಿಯೆ
* ಈ ಮೇಲ್ಕಂಡ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಎಎಫ್ ಎಸ್ ಬಿ ಪರೀಕ್ಷೆ ನಡೆಸಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.