ಕರಾವಳಿಯಲ್ಲಿ ಮೀನುಗಾರರು ತಮ್ಮ ಆಕ್ರೋಶವನ್ನು ಬೀದಿಗೆ ಬಂದು ಪ್ರತಿಭಟಿಸುವ ಮಟ್ಟಿಗೆ ಬಂದಿದೆ. ಕಡಲ ಮಕ್ಕಳು ಆಕ್ರೋಶಗೊಂಡರೆ ಎನಾಗಬಹುದು ಎಂಬುದನ್ನು ತೋರಿಸಿದ್ದಾರೆ ಇವರು ಬೀದಿಗೆ ಬಂದು ಆಕ್ರೋಶಿತರಾಗಲು ಕಾರಣವೇನು ಎಂಬುದು ಈ ಕುರಿತ ಒಂದು ವರದಿ ಇಲ್ಲಿದೆ ನೋಡಿ..
ಕರಾವಳಿ ಕಡಲತೀರದಲ್ಲಿ ಕಳೆದ ಹಲವಾರು ವರ್ಷಗಳಿಂದ ಎಗ್ಗಿಲ್ಲದೆ ಅವೈಜ್ಞಾನಿಕ ಮೀನುಗಾರಿಕೆ ಮತ್ತು ಬುಲ್ ಟ್ರಾಲ್ ಹಾಗೂ ಲೈಟ್ ಫಿಶಿಂಗ್ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ಕಡಲ ಜೀವಿಗಳ ಪ್ರಾಣಕ್ಕೆ ಕುತ್ತು ತರುವ ಈ ಮೀನುಗಾರಿಕೆ ವಿರುದ್ಧ ಯಾವೊಬ್ಬ ಅಧಿಕಾರಿ ಇನ್ನು ಕ್ರಮ ಕೈಗೊಂಡಿಲ್ಲ.
ಇದರಿಂದ ಕೆರಳಿದ ಕಡಲ ಮಕ್ಕಳು ಉಡುಪಿ, ಉತ್ತರಕನ್ನಡ, ಮಂಗಳೂರಿನಿಂದ ಆಗಮಿಸಿ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಮರವಂತೆ ಕಡಲ ತೀರದಲ್ಲಿ 200 ಕ್ಕೂ ಹೆಚ್ಚು ನಾಡದೋಣಿಗಳನ್ನು ಸಮುದ್ರದಲ್ಲಿ ಲಂಗರು ಹಾಕಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆದು ಕರ್ನಾಟಕ ರಾಜ್ಯ ಸಾಂಪ್ರಾದಾಯಕ ನಾಡದೋಣಿ ಮೀನುಗಾರರ ಒಕ್ಕೂಟದಿಂದ ಪ್ರತಿಭಟನೆ ನೆಡೆಸಿದರು.
Ghee Tea: ತುಪ್ಪದ ಟೀ ಕುಡಿದಿದ್ದೀರಾ..? ಕುಡಿದ್ರೆ ಸಿಗುತ್ತೆ ಈ ಆರೋಗ್ಯ ಲಾಭಗಳು!
ಕತ್ತಲಾಗುತ್ತಿದ್ದಂತೆ ದೊಡ್ಡ ಬೋಟ್ಗಳನ್ನ ಹತ್ತಿ, ಹೈವೋಲ್ಟೇಜ್ ಲೈಟ್ಗಳನ್ನ ಮತ್ತು ಅದಕ್ಕೆ ಬೇಕಾದ ಜನರೇಟರ್ ಹಾಕಿಕೊಂಡು ಸಮುದ್ರಕ್ಕೆ ಇಳಿಯುವ ದಂದೆಕೋರರು, ಕಡಲಾಳಕ್ಕೆ ಸುಮಾರು 2000 ವೋಲ್ಟೇಜ್ ಲೈಟ್ಗಳನ್ನ ಬಿಟ್ಟು ಮೀನುಗಾರಿಕೆ ಮಾಡುತ್ತಿದ್ದಾರೆ ಇಂತಹ ಮೀನುಗಾರಿಕೆಯನ್ನು ತಡೆಯ ಬೇಕೆಂದು ಸಂಬಂದಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಮೀನುಗಾರಿಕೆಯಿಂದ ಚಿಕ್ಕಪುಟ್ಟ ಮೀನುಗಳು, ಜೊತೆಗೆ ರಾತ್ರಿ ವೇಳೆ ಮೊಟ್ಟೆ ಇಡುವ ಮೀನುಗಳು ಮೊಟ್ಟೆ ಇಡದೆ ಸಾವನ್ನಪ್ಪುತ್ತಿವೆ. ಇನ್ನು ಕಡಲಿನ ಅನೇಕ ಜೀವಿಗಳ ಮೇಲೆ ಈ ಲೈಟ್ ಫಿಶಿಂಗ್ ಅಪಾಯಕಾರಿ ಪರಿಣಾಮ ಬೀರುತ್ತಿದ್ದು, ಇದು ಹೀಗೆ ಮುಂದುವರೆದರೆ ಅಳಿವಿನ ಅಂಚಿನಲ್ಲಿರುವ ಅನೇಕ ಕಡಲ ಜೀವಿಗಳು ನಾಶವಾಗುವ ಸಾಧ್ಯತೆ ಇದೆ. ಜೊತೆಗೆ ಮೀನಿನ ಸಂತತಿ ಕ್ರಮೇಣ ಕಡಿಮೆಯಾಗುತ್ತದೆ. ಹೀಗಾಗಿ ಕಡಲಜೀವಿಗಳ ಮೇಲೆ ಅಪಾಯಕಾರಿ ಪರಿಣಾಮ ಬೀರುವ ಈ ದಂಧೆಗೆ ಬ್ರೇಕ್ ಹಾಕಬೇಕು ಎಂದು ಮೀನುಗಾರರು ಒತ್ತಾಯಿಸಿದ್ದಾರೆ.
ಒಟ್ಟಾರೆಯಾಗಿ ಸಾಕಷ್ಟು ಆರ್ಥಿಕವಾಗಿ ಸಮಸ್ಯೆ ಆಗುತ್ತಿದೆ. ಸಮುದ್ರದಲ್ಲಿ ಮೀನು ಲಭ್ಯವಿಲ್ಲದೇ ಬೇಟೆಗೆ ತೆರಳಿದ ಸಾಂಪ್ರದಾಯಿಕ ಮೀನುಗಾರಿಕಾ ಬೋಟ್ಗಳು ಬರಿಗೈಯಲ್ಲಿ ವಾಪಸ್ ಆಗುತ್ತಿವೆ. ಕರಾವಳಿ ಭಾಗದಲ್ಲಿ ಸಾವಿರಾರು ಕುಟುಂಬಗಳ ಸಾಂಪ್ರದಾಯಿಕ ಮೀನುಗಾರಿಕೆಯನ್ನು ನಂಬಿಕೊಂಡು ಬದುಕು ಸಾಗಿಸುತ್ತಿದ್ದು, ಈ ಎರಡು ಬಗೆಯ ಮೀನುಗಾರಿಕೆ ನಡೆಯುತ್ತಿರುವುದರಿಂದ ಮೀನುಗಾರರು ಬೀದಿಗೆ ಬೀಳುವಂತಾಗಿದೆ ಎಂದು ಆಕ್ರೋಶ ಹೊರ ಹಾಕಿದರು.