ಚಿತ್ರದುರ್ಗ: ಮುಡಾ ಕೇಸ್ ಕೂಡ ಸಿಬಿಐಗೆ ಕೊಟ್ಟರೆ ಎಲ್ಲರ ಬಂಡವಾಳ ಹೊರಗಡೆ ಬರುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ಚಿತ್ರದುರ್ಗದ ಮಾದಾರಚನ್ನಯ್ಯ ಗುರುಪೀಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದ ಬಳಿಕ ಮುಡಾದಲ್ಲಿ ಸುಳ್ಳು ದಾಖಲೆ ನೀಡಿ ಜಿಟಿಡಿ ಫ್ಯಾಮಿಲಿ ಸೈಟ್ ಪಡೆದ ವಿಚಾರವಾಗಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,
ಇದು 14 ಸೈಟ್ಗಳ ವಿಚಾರವಲ್ಲ, ಸಾವಿರಾರು ಸೈಟ್ಗಳ ವಿಚಾರ. ಅವರನ್ನು ರಕ್ಷಣೆ ಮಾಡಲು ಎಲ್ಲಾ ಕೇಸ್ ಮುಚ್ಚಿ ಹಾಕುವ ಪ್ರಯತ್ನ. ಜಗ್ಗಲ್ಲ, ಬಗ್ಗಲ್ಲ ಎಂದು ಹೇಳಿ ರಾತ್ರೋರಾತ್ರಿ ಹೋಗಿ ಸೈಟ್ ವಾಪಾಸ್ ಕೊಟ್ಟಿದ್ದು ಯಾಕೆ? ತಪ್ಪು ಮಾಡಿದ್ದು ಅರಿವಾದ ಮೇಲೆ ಸಿಎಂ ಸೈಟ್ ವಾಪಸ್ ಕೊಟ್ಟಿದ್ದಾರೆ.
Ghee Tea: ತುಪ್ಪದ ಟೀ ಕುಡಿದಿದ್ದೀರಾ..? ಕುಡಿದ್ರೆ ಸಿಗುತ್ತೆ ಈ ಆರೋಗ್ಯ ಲಾಭಗಳು!
ನಿಮಗೂ ಭ್ರಷ್ಟಾಚಾರಕ್ಕೂ ಹತ್ತಿರದ ನಂಟಿದೆ. ಈ ಕೇಸ್ ಕೂಡ ಸಿಬಿಐಗೆ ಕೊಟ್ಟರೆ ಎಲ್ಲರ ಬಂಡವಾಳ ಹೊರಗಡೆ ಬರುತ್ತದೆ. ಇದರಲ್ಲಿ ಯಾರಿದ್ದಾರೆ, ಯಾರಿಲ್ಲ ಎಂಬುದು ಪ್ರಶ್ನೆಯಲ್ಲ. ನನ್ನ ಸಂಬಂಧಿಗಳು ಇದ್ದರೂ ನಾನು ಇದನ್ನೇ ಮಾತನಾಡೋದು. ಜನಪರ ವ್ಯವಸ್ಥೆ ಆಗಬೇಕೆ ಹೊರತು, ಸಂಬಂಧಿಕರು, ಸ್ವಾರ್ಥದ ವ್ಯವಸ್ಥೆ ಆಗಬಾರದು ಎಂದು ವಾಗ್ದಾಳಿ ನಡೆಸಿದರು.