ಚಿಕ್ಕಮಗಳೂರು: ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲದಂತಾಗಿದೆ, ಕಲ್ಲು ಹೃದಯದಂತೆ ವರ್ತಿಸುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ನಡೆಯುತ್ತಿದ್ದು, ಕರ್ನಾಟಕ ಸಾವಿನ ಮನೆಯಂತಾಗಿದೆ. 2,500ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಾಮಾಣಿಕ ಅಧಿಕಾರಿಗಳು ಜೀವ ಕಳೆದುಕೊಳ್ಳುತ್ತಿದ್ದಾರೆ. ತಜ್ಞರ ಸಮಿತಿ ರಚನೆಯಾಗಿದ್ದರೂ ಬಾಣಂತಿಯರು, ಹಸುಗೂಸುಗಳ ಸಾವಿಗೆ ಕಾರಣವೇನೆಂದು ತಿಳಿದಿಲ್ಲ ಎಂದರು.
Ghee Tea: ತುಪ್ಪದ ಟೀ ಕುಡಿದಿದ್ದೀರಾ..? ಕುಡಿದ್ರೆ ಸಿಗುತ್ತೆ ಈ ಆರೋಗ್ಯ ಲಾಭಗಳು!
ಇಂತಹ ಸಂದರ್ಭದಲ್ಲಿ ಡಿನ್ನರ್ ಮೀಟಿಂಗ್ ಅಲ್ಲ, ಸಾವಿಗೆ ಕಾರಣವಾದ ಸಂಬಂಧ ಉನ್ನತ ಮೀಟಿಂಗ್ ಮಾಡಬೇಕಿತ್ತು. ಸಾವಿಗೆ ಕಾರಣ ಆಸ್ಪತ್ರೆಯೋ, ವೈದ್ಯರೋ, ಔಷಧಿಯೋ ಏನು ಎಂದು ತಿಳಿಯಬೇಕಿತ್ತು. ಆದರೆ, ರಾಜ್ಯ ಸರ್ಕಾರಕ್ಕೆ ಸಂವೇದನೆ ಇಲ್ಲದಂತಾಗಿದೆ. ಕಲ್ಲು ಹೃದಯ, ಹೃದಯ ಹೀನರಂತೆ ವರ್ತಿಸುತ್ತಿದ್ದಾರೆ ಎಂದು ಹೇಳಿದರು.
ಇನ್ನೂ ನಕ್ಸಲ್ ಸಿದ್ಧಾಂತ ಸಂವಿಧಾನಕ್ಕೆ ವಿರುದ್ಧವಾದ ಸಿದ್ಧಾಂತ, ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದ ಸಿದ್ಧಾಂತ. ಅವರಿಗೆ ಬ್ಯಾಲೆಟ್ ಮೇಲೆ ನಂಬಿಕೆ ಇಲ್ಲ, ಬುಲೆಟ್ ಮೇಲೆ ನಂಬಿಕೆ ಇದೆ. ನಕ್ಸಲರಿಂದ ನಾಗರಿಕರು, ಪೊಲೀಸರು, ಸೈನಿಕರು ಪ್ರಾಣತ್ಯಾಗ ಮಾಡಿದ್ದಾರೆ. ಈ ಹಿನ್ನೆಲೆ ಪ್ಯಾಕೇಜ್ ನೀಡುವ ಮುನ್ನ ಎಲ್ಲಾ ಮಾಹಿತಿ ಕಲೆ ಹಾಕಬೇಕು. ನಕ್ಸಲ್ ಶರಣಾಗತಿ ಒಂದು ತಂತ್ರಗಾರಿಕೆ ಆಗಬಾರದು ಎಂದು ಆಗ್ರಹಿಸಿದರು.