ಕಾರವಾರ:- ಜಿಲ್ಲೆಯ ಕಾರವಾರ ತಾಲೂಕಿನ ಬಿಣಗಾ ಬಳಿಯ ಆದಿತ್ಯ ಬಿರ್ಲಾ ಗ್ರೂಪ್ನ ಕಾಸ್ಟಿಕ್ ಸೋಡಾ ಉತ್ಪಾದಿಸುವ ಗ್ರಾಸಿಮ್ ಇಂಡಸ್ಟ್ರೀಸ್ನಲ್ಲಿ ಕಾರ್ಖಾನೆಯಲ್ಲಿ ರಾಸಾಯನಿಕ ಸೋರಿಕೆಯಿಂದ 18 ಕಾರ್ಮಿಕರು ಅಸ್ವಸ್ಥಗೊಂಡಿರುವಂತಹ ಘಟನೆ ಜರುಗಿದೆ.
Prahlad Joshi: ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ: ಪ್ರಹ್ಲಾದ್ ಜೋಶಿ!
ಕಾರವಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನೀಲಕಂಠ, ಜಹನ್ನೂರು, ಕಮಲೇಶ್ ವರ್ಮಾ, ನಂದಕಿಶೋರ್, ದೀಪು, ಸೃಜನ್, ನಜೀದುಲ್ಲಾ, ಬೇಜನ್ ಕುಮಾರ್, ಕಿಶನ್ ಕುಮಾರ್, ಅಜೀಜ್, ಮೋಹಿತ್ ವರ್ಮಾ ಸೇರಿದಂತೆ ಕರ್ನಾಟಕ, ಉತ್ತರಪ್ರದೇಶ ಮತ್ತು ಬಿಹಾರ ಮೂಲದ 18 ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ
ಸದ್ಯ ಸ್ಥಳಕ್ಕೆ ಡಿವೈಎಸ್ಪಿ ಗಿರೀಶ್ ಹಾಗೂ ಪೊಲೀಸರ ತಂಡ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ್ದು, ಕಾರ್ಮಿಕರಿಂದ ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ