ಫೀಲ್ಡ್ ನಲ್ಲಿ ಬರೀ 6,4 ಕೊಡುವ ಹಿಟ್ ಮ್ಯಾನ್ ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ನಿಂದ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವಷ್ಟು ಫಾರ್ಮ್ ಕಂಡು ಬರುತ್ತಿಲ್ಲ. ಬದಲಿಗೆ ಕಳಪೆ ಪ್ರದರ್ಶನ ತೋರುತ್ತಿದ್ದಾರೆ.
ಸುವರ್ಣಸೌಧದಲ್ಲೇ ಹಲ್ಲೆ: ಇದು ಗಾಂಧಿಗಿರಿಯೋ ಅಥವಾ ಗೂoಡಾಗಿರಿಯೋ? CT ರವಿ ಪ್ರಶ್ನೆ!
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ನಡುವೆಯೇ ನಿವೃತ್ತಿ ಘೋಷಿಸಲು ಮುಂದಾಗಿದ್ದರು ಎಂಬ ವಿಚಾರ ಇದೀಗ ಬಹಿರಂಗವಾಗಿದೆ.
ರೋಹಿತ್ ಶರ್ಮಾ ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಬಳಿಕ ನಿವೃತ್ತಿ ಘೋಷಿಸಲು ಸಜ್ಜಾಗಿದ್ದರು. ಈ ವಿಷಯ ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಅವರಿಗೂ ಗೊತ್ತಿತ್ತು. ಆದರೆ ಕೊನೆಯ ಕ್ಷಣದಲ್ಲಿ ರೋಹಿತ್ ತಮ್ಮ ನಿರ್ಧಾರವನ್ನು ಬದಲಿಸಿದರು.
ಆದರೆ ರೋಹಿತ್ ಶರ್ಮಾ ಅವರ ಈ ನಿರ್ಧಾರದಿಂದ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅಸಮಾಧಾನಗೊಂಡಿದ್ದರು. ನಿವೃತ್ತಿ ನಿರ್ಧಾರವನ್ನು ಪ್ರಸ್ತಾಪಿಸಿದ ಬಳಿಕ ರೋಹಿತ್ ದಿಢೀರ್ ಟೆಸ್ಟ್ ಕ್ರಿಕೆಟ್ಗೆ ವಿದಾಯ ತೀರ್ಮಾನದಿಂದ ಹಿಂದೆ ಸರಿದಿದ್ದು ಗಂಭೀರ್ ಅವರಿಗೆ ಇಷ್ಟವಾಗಿರಲಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ.
ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿನ ಹೀನಾಯ ಸೋಲಿನ ಬಳಿಕ ರೋಹಿತ್ ಶರ್ಮಾ ನಿವೃತ್ತಿ ನಿರ್ಧಾರವನ್ನು ತೆಗೆದುಕೊಂಡಿದ್ದರು. ಆದರೆ ಅವರ ‘ಹಿತೈಷಿಗಳು’ ಅವರೊಂದಿಗೆ ಮಾತನಾಡಿ ನಿರ್ಧಾರವನ್ನು ಬದಲಾಯಿಸುವಂತೆ ಮನವೊಲಿಸುವಲ್ಲಿ ಯಶಸ್ವಿಯಾದರು. ಹೀಗಾಗಿ ಅವರು ನಿವೃತ್ತಿ ಘೋಷಿಸಿಲ್ಲ.
ಈ ವಿಚಾರದಲ್ಲಿ ಟೀಮ್ ಇಂಡಿಯಾ ಕೋಚ್ ಗೌತಮ್ ಗಂಭೀರ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದೇ ಕಾರಣದಿಂದಾಗಿ ರೋಹಿತ್ ಶರ್ಮಾ ಸಿಡ್ನಿ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿಯೇ ಹಿಟ್ಮ್ಯಾನ್ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಕೊನೆಯ ಮ್ಯಾಚ್ನಲ್ಲಿ ಹಿಟ್ಮ್ಯಾನ್ ಕಣಕ್ಕಿಳಿದಿರಲಿಲ್ಲ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಒಂದೆಡೆ ಬ್ಯಾಟಿಂಗ್ನೊಂದಿಗೆ ಮುಗ್ಗರಿಸಿದರೆ, ಮತ್ತೊಂದೆಡೆ ನಾಯಕತ್ವದಲ್ಲೂ ಚಾಣಾಕ್ಷ ನಡೆ ಪ್ರದರ್ಶಿಸಲು ವಿಫಲರಾದರು.