ಬೆಂಗಳೂರು:- ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್ ಬ್ಲಾಕ್ನಲ್ಲಿ ತಾಯಿ ಮತ್ತು ಮರಿ ಚಿರತೆ ಪ್ರತ್ಯಕ್ಷವಾಗಿದೆ. 3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಚಿರತೆ ಕೊಂದಿದೆ. ಕೂಡಲೇ ಚಿರತೆ ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ಒತ್ತಾಯಿಸಿದ್ದಾರೆ.
ಬೆಳಗ್ಗೆ, ಸಂಜೆ ವೇಳೆ ಮನೆಯಿಂದ ಹೊರಬರಲು ನಿವಾಸಿಗಳಿಗೆ ಆತಂಕ ಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಕ್ಕಳನ್ನು ನಿತ್ಯ ಶಾಲೆಗೆ ಕಳಿಸಲು ಪೋಷಕರು ಭಯ ಬೀಳುತ್ತಿದ್ದಾರೆ.
ಚಿರತೆ ಪ್ರತ್ಯಕ್ಷ ಹಿನ್ನೆಲೆ ನೀರಿನ ಟ್ಯಾಂಕರ್ನವರೂ ಏರಿಯಾಗೆ ಬರುತ್ತಿಲ್ಲ. ಕುಡಿಯಲು ನೀರಿಲ್ಲದೆ ಪರದಾಡುವಂತಾಗಿದೆ ಎಂದು ನಿವಾಸಿಗಳು ಅಳಲು ತೊಡಿಕೊಂಡಿದ್ದಾರೆ. ಈ ಹಿಂದೆಯೂ ಬಿಎಂಟಿಸಿ ಬಸ್ ಚಾಲಕನ ಮೇಲೆ ಚಿರತೆ ದಾಳಿ ನಡೆಸಿತ್ತು. ಹಾಗಾಗಿ ನಿವಾಸಿಗಳು ಜೀವ ಕೈಯಲ್ಲಿಡಿದು ಜೀವನ ಮಾಡುವಂತಾಗಿದೆ.