ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ಸದ್ಯ ಜಾಮೀನು ಪಡೆದು ಹೊರ ಬಂದಿದ್ದಾರೆ. ಹೊರಗಡೆ ಬಂದ ಬಳಿಕ ನೆಮ್ಮದಿಯಾಗಿ ಇರಬಹುದು ಎಂದುಕೊಂಡಿದ್ದ ದಾಸನಿಗೆ ಪೊಲೀಸರು ಶಾಕ್ ಮೇಲೆ ಶಾಕ್ ನೀಡ್ತಿದ್ದಾರೆ. ಇದೀಗ ದರ್ಶನ್ ಗೆ ಮತ್ತೊಂದು ಸಂಕಷ್ಟು ಎದುರಾಗಿದೆ.
ನಟ ದರ್ಶನ್ ವಿರುದ್ಧ ಮತ್ತೊಂದು ಕ್ರಮಕ್ಕೆ ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ನಟನಿಗೆ ಇರುವ ಪ್ರಮುಖ ಸವಲತ್ತು ಹಿಂಪಡೆಯಲು ನಿರ್ಧಾರ ಮಾಡಲಾಗಿದೆ. ದರ್ಶನ್ ಬಳಿ ಗನ್ ಲೈಸೆನ್ಸ್ ಇದ್ದು ಅದನ್ನು ಹಿಂಪಡೆಯುವ ಬಗ್ಗೆ ಪೊಲೀಸರು ಆಲೋಚಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ದರ್ಶನ್ ಅವರಿಗೆ ಪೊಲೀಸರಿಂದ ನೋಟಿಸ್ ನೀಡಿದ್ದಾರೆ ಎನ್ನಲಾಗುತ್ತಿದೆ.
ಸೆಲೆಬ್ರಿಟಿ ಆಗಿರುವ ಕಾರಣದಿಂದ ದರ್ಶನ್ ಅವರು ತಮ್ಮ ಭದ್ರತೆಗಾಗಿ ಗನ್ ಲೈಸೆನ್ಸ್ ಪಡೆದಿದ್ದರು. ಆದರೆ ಈಗ ಅವರು ಕೊಲೆ ಪ್ರಕರಣದ ಆರೋಪಿ ಆಗಿರುವ ಕಾರಣ ಲೈನೆನ್ಸ್ ರದ್ದು ಮಾಡುವ ಕುರಿತು ಆಯೋಚಿಸಲಾಗಿದೆ. ‘ನಿಮ್ಮ ಬಳಿ ಇರುವ ಗನ್ ಲೈಸೆನ್ಸ್ ಯಾಕೆ ರದ್ದು ಮಾಡಬಾರದು’ ಎಂದು ಪ್ರಶ್ನಿಸಿ ನೋಟಿಸ್ ಕಳಿಸಲಾಗಿದೆ. 7 ದಿನಗಳಲ್ಲಿ ಈ ನೋಟಿಸ್ಗೆ ಉತ್ತರ ನೀಡುವಂತೆ ದರ್ಶನ್ ಅವರಿಗೆ ಸೂಚಿಸಲಾಗಿದೆ.
ಒಂದಷ್ಟು ದಿನಗಳ ಹಿಂದೆ ದರ್ಶನ್ ಮತ್ತು ಅವರ ಸಹಚರರಿಗೆ ಜಾಮೀನು ಸಿಕ್ಕಿತು. ಈ ಪ್ರಕರಣದ ಸಾಕ್ಷಿಗಳಿಗೆ ದರ್ಶನ್ ಬೆದರಿಕೆ ಹಾಕುವ ಸಾಧ್ಯತೆ ಇದೆ. ಅಲ್ಲದೆ, ದರ್ಶನ್ ಅವರು ಗನ್ ಲೈಸೆನ್ಸ್ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆ ಕೂಡ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಆಡಳಿತ ವಿಭಾಗದ ಡಿಸಿಪಿ ಪದ್ಮಿನಿ ಸಾಹು ಅವರಿಂದ ಈ ನೋಟಿಸ್ ಜಾರಿಯಾಗಿದೆ. ಜ.10ರಂದು ದರ್ಶನ್ ಗೆ ನೋಟಿಸ್ ಜಾರಿಯಾಗಿದೆ.
ಕೊಲೆ ಆರೋಪಿ ದರ್ಶನ್ ಗೆ ಮತ್ತೊಂದು ನೋಟಿಸ್ ನೀಡಿದ ಪೊಲೀಸರು
By Author AIN