ಬೆಂಗಳೂರು:-ಕುಮಾರಸ್ವಾಮಿ ಮುಗಿಸಲು ಕಾಂಗ್ರೆಸ್ ಹುನ್ನಾರ ಮಾಡ್ತಿದೆ ಎಂದು HD ದೇವೇಗೌಡ ಹೇಳಿದ್ದಾರೆ.
ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ದೇವೇಗೌಡರು,
ಜೆಡಿಎಸ್ ಪಕ್ಷವನ್ನು ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ಕುಮಾರಸ್ವಾಮಿ ಅವರನ್ನು ಮುಗಿಸಲು ಕಾಂಗ್ರೆಸ್ ಹುನ್ನಾರ ನಡೆಸುತ್ತಿದೆ. ಅವರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಕುಮಾರಸ್ವಾಮಿ ಅವರನ್ನಾಗಲೀ, ಜೆಡಿಎಸ್ ಪಕ್ಷವನ್ನಾಗಲೀ ಮುಗಿಸಲು ಸಾಧ್ಯವೇ ಇಲ್ಲ. ಕುಮಾರಸ್ವಾಮಿ ಅವರ ಹಿಂದೆ ಕಾರ್ಯಕರ್ತರ ದೊಡ್ಡ ಪಡೆಯೇ ಇದೆ ಎಂದು ಮಾಜಿ ಪ್ರಧಾನಿಗಳು ಹೇಳಿದ್ದಾರೆ.
ಇನ್ನೂ ಆಮಿಷ ಗಳನ್ನು ಒಡ್ಡಿ ಶಾಸಕರನ್ನು ಸಂಪರ್ಕ ಮಾಡುವ ಪ್ರಯತ್ನ ನಡೆಯುತ್ತಿದೆ. ಆದರೆ, ಆ ಪ್ರಯತ್ನ ಈಡೇರುವುದಿಲ್ಲ ಎಂದು ಕೇಂದ್ರ ಸಚಿವರೂ ಆದ ಕುಮಾರಸ್ವಾಮಿ ಹೇಳಿದ್ದಾರೆ. ‘ಜೆಡಿಎಸ್ ಪಕ್ಷದ ಬಗ್ಗೆ ಕಾಂಗ್ರೆಸ್ನಲ್ಲಿ ಕೆಲವರು ಮಾತನಾಡುತ್ತಿದ್ದಾರೆ. ಅವರು ಯಾವ ರೀತಿ ಅಡ್ಜಸ್ಟ್ಮೆಂಟ್ ಮಾಡಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ ಎನ್ನುವುದು ನಮಗೆ ಗೊತ್ತಿದೆ. ಅಂಥವರ ಮಾತಿಗೆ ಹೆಚ್ಚು ತಲೆ ಕೆಡಿಸಿಕೊಳ್ಳಬೇಡಿ’ ಎಂದು ಜೆಡಿಎಸ್ ಸಭೆಯಲ್ಲಿ ಕುಮಾರಸ್ವಾಮಿ ತಿಳಿ ಹೇಳಿದ್ದಾರೆ.