ಅಮೆರಿಕಾದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅವರ ಪ್ರಮಾಣ ವಚನ ಸಮಾರಂಭ ಜ.20ರಂದು ನಡೆಯಲಿದೆ. ಟ್ರಂಪ್ ಅಮೆರಿಕದ 47 ನೇ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಲಿದ್ದು ಈ ವೇಳೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾಗಿಯಾಗಲಿದ್ದಾರೆ.
ಕಳೆದ ವರ್ಷ ನವೆಂಬರ್ನಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ 312 ಎಲೆಕ್ಟೋರಲ್ ಮತಗಳನ್ನು ಮತ್ತು ಹ್ಯಾರಿಸ್ 226 ಎಲೆಕ್ಟೋರಲ್ ಮತಗಳನ್ನು ಪಡೆದಿದ್ದರು. ಚುನಾವಣೆಯಲ್ಲಿ ಬಹುಮತ ಪಡೆಯಲು ಅಭ್ಯರ್ಥಿಗೆ 270 ಚುನಾವಣಾ ಮತಗಳ ಅಗತ್ಯವಿದೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಾರ, ವಾಷಿಂಗ್ಟನ್ಗೆ ಭೇಟಿ ನೀಡುವ ಸಂದರ್ಭದಲ್ಲಿ, ಜೈಶಂಕರ್ ಅವರು ಅಮೆರಿಕದ ಟ್ರಂಪ್ ಆಡಳಿತದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಅಮೆರಿಕದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಅಧ್ಯಕ್ಷ ಡೊನಾಲ್ಡ್ ಜೆ. ಟ್ರಂಪ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಜೈಶಂಕರ್ ಭಾರತ ಸರ್ಕಾರವನ್ನು ಪ್ರತಿನಿಧಿಸಲಿದ್ದಾರೆ ಎನ್ನಲಾಗುತ್ತಿದೆ.
ಟ್ರಂಪ್ ಪ್ರಮಾಣ ವಚನ ಸ್ವೀಕರಿಸಿದ ನಂತರ ಆಯೋಜಿಸಲಾಗುವ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಭಾರತೀಯ ಅಮೆರಿಕನ್ ಧೋಲ್ ಬ್ಯಾಂಡ್ಗೆಗೆ ಆಹ್ವಾನ ನೀಡಲಾಗಿದೆ.