ಬೆಂಗಳೂರು:- ಬೆಂಗಳೂರು ನಗರದಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದರಿಂದ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ.
Hubballi: ವರದಶ್ರೀ ಫೌಂಡೇಷನ್ ವತಿಯಿಂದ ರಾಜ್ಯಾದ್ಯಂತವಿಷಮುಕ್ತ ಸ್ನಾನ ಅಭಿಯಾನ!
ಅದರಂತೆ ಡ್ರಂಕ್ ಆ್ಯಂಡ್ ಡ್ರೈವ್ ಮಾಡುವವರ ವಿರುದ್ಧ ಬೆಂಗಳೂರು ಪೊಲೀಸರು ಸಮರ ಸಾರಿದ್ದು, ದಂಡದ ಬಿಸಿ ಮುಟ್ಟಿಸಲು ಸಜ್ಜಾಗಿದ್ದಾರೆ.
ಜ. 6ರಿಂದ 12 ರವರೆಗೆ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿದ್ದು, ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ. ಜೊತೆಗೆ 30,4000 ರೂ ದಂಡ ಸಂಗ್ರಹಿಸಲಾಗಿದೆ.
ಬೆಂಗಳೂರು ನಗರ ಸಂಚಾರ ಪೊಲೀಸ್ ವಿಭಾಗವು ಜ. 6 ರಿಂದ 12 ರವರೆಗೆ ಮದ್ಯಪಾನಮಾಡಿ ವಾಹನ ಚಲಾಯಿಸುತ್ತಿದ್ದ ವಾಹನ ಚಾಲಕರು ಮತ್ತು ಸವಾರರ ವಿರುದ್ಧ ಮತ್ತು ಅತಿವೇಗ ವಾಹನ ಚಲಾಯಿಸುವವರ ವಿರುದ್ಧ ನಗರದ 50 ಸಂಚಾರ ಪೊಲೀಸ್ ಠಾಣೆಗಳಲ್ಲಿ ವಿಶೇಷ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದೆ
ಮದ್ಯಪಾನ ಮಾಡಿ ವಾಹನ ಚಾಲನೆಯ ವಿವರ
ಪರಿಶೀಲಿಸಲಾದ ವಿವಿಧ ಮಾದರಿಯ ವಾಹನಗಳ ಸಂಖ್ಯೆ- 57860
ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ-861
ಅತಿವೇಗ ಚಲಾಯಿಸಿದವರ ವಿರುದ್ಧ ದಾಖಲಾದ ಪ್ರಕರಣಗಳು
ದಾಖಲಿಸಿದ ಒಟ್ಟು ಪ್ರಕರಣಗಳ ಸಂಖ್ಯೆ: 290
ಸಂಗ್ರಹಿಸಿದ ದಂಡದ ಮೊತ್ತ: 304000 ರೂ.