ಬಳ್ಳಾರಿ: ಯಾವಾಗ ಓರ್ವ ಯುವತಿ ಮಧ್ಯ ರಾತ್ರಿ 12 ಗಂಟೆಗೆ ರಸ್ತೆ ಮೇಲೆ ಯಾವುದೇ ಭಯವಿಲ್ಲದೆ ಓಡಾಡುತ್ತಾಲೋ ಆಗಲೇ ದೇಶಕ್ಕೆ ಸ್ವಾತಂತ್ರ್ಯ ಬರೋದು ಎಂಬ ಮಾತೊಂದಿತ್ತು,. ಆದರೆ ಇಡೀ ದೇಶದಲ್ಲಿ ಈಗಲೂ ಹೆಣ್ಮಕ್ಕಳಿಗೆ ಯಾವುದೇ ಸುರಕ್ಷತೆ ಇಲ್ಲ. ದಿನಕ್ಕೊಂದು ರೇಪ್ ಕೇಸ್ಗಳು ದಾಖಲಾಗುತ್ತಿವೆ. ಇದೀಗ ಸಂಡೂರು ತಾಲೂಕಿನಲ್ಲಿ ಐದು ವರ್ಷದ ಬಾಲಕಿ ಮೇಲೆ ಅಪರಿಚಿತನೊಬ್ಬ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ.
ಖಾಸಗಿ ಕಾರ್ಖಾನೆಯೊಂದರಲ್ಲಿ ಕೆಲಸಕ್ಕೆಂದು ಹತ್ತು ವರ್ಷಗಳ ಹಿಂದೆ ತೋರಣಗಲ್ಲಿಗೆ ಬಂದು ನೆಲೆಸಿದ್ದ ಉತ್ತರ ಭಾರತ ದಂಪತಿಯ ಮಗು ಸೋಮವಾರ ಮಕ್ಕಳೊಂದಿಗೆ ಮನೆ ಬಳಿ ಆಟವಾಡುತ್ತಿತ್ತು. ಮಗುವನ್ನು ಪುಸಲಾಯಿಸಿ ಕರೆದೊಯ್ದಿರುವ ದುಷ್ಕರ್ಮಿ ದೌರ್ಜನ್ಯ ಎಸಗಿದ್ದಾರೆ.
Kisan credit card: ಕಿಸಾನ್ ಕ್ರೆಡಿಟ್ ಕಾರ್ಡ್ ಸಾಲ ಯೋಜನೆಯಿಂದ ರೈತರಿಗೆ ಆಗುವ ಲಾಭಗಳೇನು ಗೊತ್ತಾ..?
ಆರೋಪಿ ಪತ್ತೆ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಲೈಂಗಿಕ ದಾಳಿಯಿಂದಾಗಿ ಮಗುವಿಗೆ ಆಂತರಿಕ ಗಾಯವಾಗಿದ್ದು, ರಕ್ತಸ್ರಾವ ಉಂಟಾಗಿತ್ತು. ಕೂಡಲೇ ಬಳ್ಳಾರಿಯ ಸರ್ಕಾರಿ ಆರೋಗ್ಯ ಸಂಸ್ಥೆಯೊಂದಕ್ಕೆ ಮಗುವನ್ನು ದಾಖಲಿಸಲಾಗಿದೆ ಎಂಬುದು ತಿಳಿದು ಬಂದಿದೆ.