ಬೆಂಗಳೂರು:- ಕರ್ನಾಟಕದ 6 ಜಿಲ್ಲೆಗಳಲ್ಲಿ ನಾಳೆ ಮಳೆ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದ್ದಾರೆ.
Ashok: ಹಸುವಿನ ಕೆಚ್ಚಲು ಕೊಯ್ದ ಪ್ರಕರಣ: ಸರ್ಕಾರಕ್ಕೆ ಮತಿಭ್ರಮಣೆಯಾಗಿದೆ – ಅಶೋಕ್!
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಸನ, ಚಾಮರಾಜನಗರ, ಕೊಡಗು, ಮೈಸೂರು, ಚಿಕ್ಕಮಗಳೂರು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ಇನ್ನು ಉತ್ತರ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಮಂಜು ಬೀಳುವ ಸಾಧ್ಯತೆ ಇದೆ. ಜನವರಿ 20 ರವರೆಗೂ ಇದೇ ಹವಾಮಾನ ಮುಂದುವರಿಯಲಿದೆ.
ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸೋಮವಾರ ಹಗುರ ಮಳೆಯಾಗಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 14.6 ಡಿ.ಸೆ ಹಾಗೂ ಉತ್ತರ ಕನ್ನಡ ಜಿಲ್ಲೆ ಹೊನ್ನಾವರದಲ್ಲಿ ಗರಿಷ್ಠ ತಾಪಮಾನ 32.8 ಡಿ.ಸೆ ದಾಖಲಾಗಿದೆ. ಇನ್ನು ಬೆಂಗಳೂರಿನಲ್ಲಿ ಇನ್ನೆರಡು ದಿನ 20 ಡಿಗ್ರಿ ಸೆಲ್ಸಿಯಸ್ ತಾಪಮಾನ ಮುಂದುವರಿಯುವ ಸಾಧ್ಯತೆ ಇದೆ.