ಬೆಳಗಾವಿ;- ರಾಜ್ಯ ಸಚಿವೆ ಲಕ್ಷ್ಮೀ ಹೆಬ್ಬಾಕ್ಳರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. ನಿನ್ನೆ ಸಂಕ್ರಾಂತಿ ಹಬ್ಬದ ದಿನವೇ ಬೆಳಗಾವಿಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಬಳಿ ನಾಯಿಗಳು ಅಡ್ಡಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಹೆಬ್ಬಾಳ್ಕರ್ ಗಾಯಗಳಾಗಿತ್ತು. ಇನ್ನು ಈ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸರ್ಕಾರಿ ಕಾರು ಚಾಲಕನ ವಿರುದ್ಧ ದೂರು ದಾಖಲಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಗನ್ಮ್ಯಾನ್ ಈರಪ್ಪ ಹುಣಶಿಕಟ್ಟಿ ದೂರಿನ ಮೇರೆಗೆ ಕಾರು ಚಾಲಕ ಜಿ.ಶಿವಪ್ರಸಾದ್ ವಿರುದ್ಧ ಕಿತ್ತೂರು ಠಾಣೆಯಲ್ಲಿ 281, 125ಎ, 125ಬಿ ಅಡಿ ಪ್ರಕರಣ ದಾಖಲಾಗಿದೆ.
ಜೀವಕ್ಕೆ ಕುತ್ತು ತುರುವ ಹಾಗೂ ನಿಷ್ಕಾಳಜಿ ವಾಹನ ಚಾಲನೆ, ಅಜಾಗರುತೆಯಿಂದ ವಾಹನ ಚಾಲನೆ ಕಲಂಗಳಲ್ಲಿ ಬೆಳಗಾವಿಯ ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.