ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಮುಡಾ ನಿವೇಶನ ಹಂಚಿಕೆ ಅಕ್ರಮ ಆರೋಪ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ಸಂಬಂಧ ಸಿಎಂಗೆ ಹೈಕೋರ್ಟ್ ರಿಲೀಫ್ ನೀಡಿದೆ.
ಸಿಎಂ ಪರ ವಕೀಲ ಕಪಿಲ್ ಸಿಬಲ್ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನ ಮುಂದೂಡಲಾಗಿದೆ. ಇನ್ನು ಅರ್ಜಿ ವಿಚಾರಣೆಗೂ ಮುನ್ನ ಮಾತನಾಡಿದ ಸ್ನೇಹಮಯಿ ಕೃಷ್ಣ, ಇವತ್ತೇ ತೀರ್ಪು ಪ್ರಕಟ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು.
Mouth Wash Effects: ಬ್ರಷ್ ಮಾಡಿದ ನಂತರ ಮೌತ್ ವಾಶ್ ಬಳಸುತ್ತೀರಾ..? ಹಾಗಾದ್ರೆ ಅನುಕೂಲಕ್ಕಿಂತ ಅಪಾಯವೇ ಹೆಚ್ಚು!
ಆದ್ರೀಗ ಸ್ನೇಹಮಯಿ ಕೃಷ್ಣ ನಿರೀಕ್ಷೆ ಹುಸಿಯಾಗಿದ್ದು, ಇದು ಸಿಎಂಗೆ ನಿಟ್ಟುಸಿರು ಬಿಡುವಂತೆ ಮಾಡಿದೆ. ವಾದ ಪ್ರತಿವಾದ ಆಲಿಸಿದ ಹೈಕೋರ್ಟ್ ಅರ್ಜಿ ವಿಚಾರಣೆಯನ್ನ ಜನವರಿ 27ಕ್ಕೆ ಮುಂದೂಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ ನೀಡಿದೆ.