ಬೆಂಗಳೂರು:- ಹಸುಗಳ ಕೆಚ್ಚಲು ಕೊಯ್ದು ಬೆಂಗಳೂರಿನಲ್ಲಿ ಕಿಡಿಗೇಡಿಗಳು ವಿಕೃತಿ ಮೆರೆದಿದ್ದರು. ಇದೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ಇದೆಲ್ಲಾ ಸರ್ಕಾರದ ವೈಫಲ್ಯ ಎಂದು ಆರೋಪಿಸಿ ಜಿ. ಪರಮೇಶ್ವರ್ ಮನೆಮುಂದೆ ಪ್ರತಿಭಟನೆಗೆ ಕರೆ ಕೊಟ್ಟಿದೆ.
Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನಾಳೆ ಪವರ್ ಕಡಿತ! ಕರೆಂಟ್ ಕಟ್ ಆಗುವ ಏರಿಯಾಗಳ ಪಟ್ಟಿ ಇಲ್ಲಿದೆ!
ತುಮಕೂರಿನ ಹೆಗ್ಗೆರೆ ಬಳಿಯ ಸಿದ್ದಾರ್ಥ ನಗರದಲ್ಲಿರುವ ಪರಮೇಶ್ವರ್ ಮನೆಮುಂದೆ ಬೆಳಗ್ಗೆ 10:30ಕ್ಕೆ ಪ್ರತಿಭಟನೆ ನಡೆಸಲು ಜಿಲ್ಲಾ ಬಿಜೆಪಿ ಘಟಕ ಕರೆ ನೀಡಿದೆ. ಪ್ರತಿಭಟನೆ ಹಿನ್ನೆಲೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಒಬ್ಬರು ಎಎಸ್ಪಿ, ಇಬ್ಬರು ಡಿವೈಎಸ್ಪಿ, ನೇತೃತ್ವದಲ್ಲಿ ಭದ್ರತೆ ನೀಡಿದ್ದು, ಸುಮಾರು ನೂರೈವತ್ತಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.